Monday, May 20, 2024

ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಐದು ಬಾರಿ ಬೆಳ್ತಂಗಡಿಯ ಶಾಸಕರಾಗಿದ್ದ ಕೆ. ವಸಂತ ಬಂಗೇರ (79) ಇಂದು ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕರಾಗಿದ್ದ ಇವರು ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಗಳ ಪುತ್ರರಾಗಿ 1946ರಲ್ಲಿ ಜನಿಸಿದ್ದರು. ಬಿಜೆಪಿ, ಕಾಂಗ್ರೆಸ್​ ಹಾಗೂ ಜೆಡಿಎಸ್ (ಜನತಾದಳ) ಪಕ್ಷದಿಂದ ಗೆದ್ದು ಶಾಸಕರಾಗಿದ್ದರು.

ಇತ್ತೀಚೆಗೆ ವಸಂತ ಬಂಗೇರ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ.

ವಸಂತ ಬಂಗೇರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನನ್ನ ಆತ್ಮೀಯ ಗೆಳೆಯ ಮತ್ತು ದೀರ್ಘ ಕಾಲದ ಸಹದ್ಯೋಗಿ ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ ಎಂದು ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ಭೇಟಿ ಮಾಡಿ ಮಾತನಾಡಿಸಿದ್ದೆ

ನೇರ, ನಿಷ್ಠುರ ನಡೆ-ನುಡಿಯ ಬಂಗೇರ, ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ. ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಮಾತನಾಡಿಸಿದ್ದೆ. ಇಷ್ಟು ಬೇಗ ನಮ್ಮನ್ನು ಅಗಲಿ ಹೋಗುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಬಂಗೇರ ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES