Monday, May 20, 2024

ಶಾಸಕ HD ರೇವಣ್ಣಗೆ ಕೈದಿ ನಂಬರ್ 4567 : ಸೀರಿಯಲ್ ನಂಬರ್ ಬಂದಿರುವುದೇ ಅಚ್ಚರಿ

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲುಪಾಲಾಗಿರುವ ಜೆಡಿಎಸ್ ಶಾಸಕ ಹೆಚ್​.ಡಿ ರೇವಣ್ಣರಿಗೆ ವಿಚಾರಣಾಧೀನ ಕೈದಿ ನಂಬರ್ 4567 ನೀಡಲಾಗಿದೆ.

ಪ್ರಕರಣದ ಸಂಬಂಧ ವಿಚಾರಣೆ ನಡೆಸಿದ 17ನೇ ಎಸಿಎಂಎಂ ನ್ಯಾಯಾಲಯ ರೇವಣ್ಣರಿಗೆ 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಹೀಗಾಗಿ, ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆ ಇದೀಗ ಜೈಲು ಅಧಿಕಾರಿಗಳು ರೇವಣ್ಣರಿಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ್ದಾರೆ. ಕೈದಿ ಸಂಖ್ಯೆಯಲ್ಲಿ ಸೀರಿಯಲ್ (4567) ನಂಬರ್ ಬಂದಿರುವುದು ಅಚ್ಚರಿಯ ಸಂಗತಿಯಾಗಿದೆ.

ಪ್ರಜ್ವಲ್ ರೇವಣ್ಣರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂಸತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ರೇವಣ್ಣರನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದರು. ಎಸ್​ಐಟಿ ಕಸ್ಟಡಿ ಅಂತ್ಯಗೊಂಡ ಹಿನ್ನಲೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ.

ಎಸ್​ಐಟಿ ಕಸ್ಟಡಿ ಅವಧಿ ಮೇ 8ಕ್ಕೆ ಮುಕ್ತಾಯವಾಗಿದ್ದರಿಂದ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಎಸ್​ಐಟಿ ಹಾಗೂ ರೇವಣ್ಣ ಪರ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು, ರೇವಣ್ಣ ಮನವಿಗೆ ಸ್ಪಂದಿಸದೇ ​ ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ.

RELATED ARTICLES

Related Articles

TRENDING ARTICLES