Sunday, May 19, 2024

Loksabha Election: ಮೇ 14ಕ್ಕೆ ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೊದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಕೆ ಮಾಡಲು ದಿನಾಂಕ ನಿಗಧಿಯಾಗಿದ್ದು, ಮೇ 14 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಮೇ 14ರಂದು ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ಮೋದಿ, ಮೂರನೆ ಬಾರಿಗೆ ವಾರಣಾಸಿಯಿಂದ ಕಣಕ್ಕಿಳಿಯಲಿದ್ದಾರೆ. ಇನ್ನು ನಾಮ ಪತ್ರ ಸಲ್ಲಿಕೆಗೂ ಮುನ್ನಾ ಬೃಹತ್​ ರೋಡ್​ ಶೋ ನಡೆಸಿ ಜನಬೆಂಬಲದೊಂದಿಗೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ:  ಸಂತ್ರಸ್ತೆ ಅಪಹರಣ ಆರೋಪ : ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ

ಈ ಬಾರಿಯ ಲೋಕಸಭಾ ಚುನಾವಣೆಯನ್ನು ದೇಶದಾದ್ಯಂತ ಏಳು ಹಂತಗಳಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದ್ದು ಈಗಾಗಲೇ ಮೂರು ಹಂತದ ಚುನಾವಣೆ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿದೆ.  ಪ್ರಧಾನಿ ಮೋದಿ ಚುನಾವಣಾ ಅಖಾಡಕ್ಕಿಳಿದಿರುವ ವಾರಣಾಸಿ ಕ್ಷೇತ್ರದಲ್ಲಿ ಏಳನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ಮೇ 14ರಂದು ಮೋದಿ ನಾಮಪತ್ರ ಸಲ್ಲಿಸಲಿದ್ದಾರೆ.

ಏಳನೆ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 14 ಕೊನೆಯ ದಿನವಾಗಿದ್ದು ನಾಮಪತ್ರ ವಾಪಾಸ್​ ಪಡೆಯಲು ಮೇ 15 ಕೊನೆಯ ದಿನವಾಗಿದೆ.

 

RELATED ARTICLES

Related Articles

TRENDING ARTICLES