Monday, May 20, 2024

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಳ್ಳಂಬೆಳಗ್ಗೆ ತಂಪಾದ ವಾತಾವರಣ ಇದ್ದು, ಬೆಂಗಳೂರಿನಾದ್ಯಂತ ವರುಣಾಗಮನದ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವರ್ತೂರು, ಬ್ರೂಕ್‌ಫೀಲ್ಡ್, ಮಹದೇವಪುರ, ವೈಟ್‌ಫೀಲ್ಡ್, ಕಲ್ಯಾಣ ನಗರ, ಮಾರತ್ತಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಬನಶಂಕರಿ, ಬಿಟಿಎಂ ಲೇಔಟ್, ಕೊತ್ನೂರು, ಗೊಟ್ಟಿಗೆರೆ, ಟಿಸಿ ಪಾಳ್ಯ, ಕೆಆರ್ ಪುರ, ಕುಮಾರಸ್ವಾಮಿ ಲೇಔಟ್, ಉತ್ತರಹಳ್ಳಿ, ಹೆಚ್‌ಎಸ್‌ಆರ್ ಲೇಔಟ್, ಮಡಿವಾಳ, ಹುಳಿಮಾವು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ತುಂತುರು ಮಳೆಯಾಗಿದೆ.

RELATED ARTICLES

Related Articles

TRENDING ARTICLES