Sunday, May 19, 2024

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಮಾರ್ಚ್​ ಮತ್ತು ಏಪ್ರಿಲ್​ನಲ್ಲಿ ನಡೆದಿದ್ದ SSLC ಪರೀಕ್ಷೆ-1ರ ಫಲಿತಾಂಶ ಮೇ-9 ರಂದು ಶುಕ್ರವಾರ ಪ್ರಕಟಗೊಳ್ಳಲಿದೆ.

ಬೆಳಗ್ಗೆ 10.30 ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ನಡೆದ ಎಸ್​ ಎಸ್​ ಎಲ್​ ಸಿ ಪರೀಕ್ಷೆಗಳಲ್ಲಿ ರಾಜ್ಯಾದ್ಯಂತ ಸುಮಾರು 8.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

RELATED ARTICLES

Related Articles

TRENDING ARTICLES