Monday, May 20, 2024

ಇದೇನು ಗೌಡ್ರೇ..? : ದೇವರಾಜೇಗೌಡ ವಿರುದ್ಧವೇ ಲೈಂಗಿಕ ಕಿರುಕುಳ ಪ್ರಕರಣ ದಾಖಲು

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಇದೀಗ, ಪ್ರಜ್ವಲ್​ ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ವಕೀಲ ದೇವರಾಜೇಗೌಡ ವಿರುದ್ದವೇ ಎಫ್ಐಆರ್ ದಾಖಲಾಗಿದೆ.

ಮಹಿಳೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪವರ್ ಟಿವಿಯಲ್ಲಿ ಸಂತ್ರಸ್ತ ಮಹಿಳೆ ದೇವರಾಜೇಗೌಡರ ನಿಜಬಣ್ಣ ಬಯಲು ಮಾಡಿದ್ದಾರೆ.

10 ತಿಂಗಳ ಹಿಂದೆ ಪರಿಚಯವಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ವಾಟ್ಸಾಪ್ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ದೇವರಾಜ್ ವಿರುದ್ಧ ಕೇಳಿ ಬಂದಿದೆ.

ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ

ಅದೇ ರೀತಿ ಬಳಿಕ ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪವೂ ಕೇಳಿ ಬಂದಿದೆ. ಮಹಿಳೆಗೆ ಫೋನ್ ಮಾಡಿ ತಾವು ಜೊತೆಯಲ್ಲಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ ಆರೋಪವೂ ದಾಖಲಾಗಿದೆ. ಅದೇ ರೀತಿ ಮಹಿಳೆಗೆ ವಿಡಿಯೋ ಕಾಲ್‌ ಮಾಡಿ‌ ಖಾಸಗಿ ಅಂಗಗಳನ್ನು ಪ್ರದರ್ಶನದ ಮಾಡಿರುವ ಆರೋಪವೂ ದಾಖಲಾಗಿದೆ.

ನಿನ್ನ ಗಂಡನ ಜೀವಕ್ಕೆ ಅಪಾಯ ಎಂದು ಧಮ್ಕಿ

ತಾನು ಹೇಳಿದ ಹಾಗೆ ಕೇಳಬೇಕು.ಇಲ್ಲದೇ ಹೋದರೆ ಗಂಡನ ಜೀವಕ್ಕೆ ಅಪಾಯ ತಂದೊಡ್ಡುವುದಾಗಿ ದೇವರಾಜೇಗೌಡ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ತನ್ನ ಬೆಂಬಲಿಗರನ್ನು ಕಳುಹಿಸಿ ಜೀವ ಬೆದರಿಕೆ ಹಾಕಿದ ಅರೋಪವೂ ಕೇಳಿ ಬಂದಿದೆ. ಹಲವಾರು ಆರೋಪಗಳ ಮೇಲೆ ದೂರು ದಾಖಲಾಗಿದೆ.

RELATED ARTICLES

Related Articles

TRENDING ARTICLES