Monday, May 20, 2024

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ : 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಮೇ 11ರವರೆಗೂ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆ ಸೇರಿದಂತೆ ರಾಜ್ಯದ 18 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಎಡಡು ದಿನ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಿದೆ.

ಕರ್ನಾಟಕದ ಒಳನಾಡಿನಲ್ಲಿ ವಾಯು ಭಾರ ಕುಸಿತ ಹಿನ್ನಲೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮೇ 11 ರವರೆಗೆ ಮಳೆ ಅಬ್ಬರಿಸಲಿದೆ. ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಯಲ್ಲಿ ಜೋರು ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ನಾಳೆ ಹಾಗೂ ನಾಡಿದ್ದು ಮಳೆಯಾಗಲಿದೆ. ಹೀಗಾಗಿ, ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 12ರ ನಂತರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲಿನ ಧಗೆಗೆ ಬೇಸತ್ತ ಬೆಂಗಳೂರು ಮಂದಿಗೆ ಇನ್ನೂ ಎರಡ್ಮೂರು ದಿನ ಮಳೆರಾಯ ತಂಪೆರೆಯಲಿದ್ದಾನೆ.

RELATED ARTICLES

Related Articles

TRENDING ARTICLES