Monday, May 20, 2024

ಮತ್ತೆ ಬೆಂಗಳೂರಿನಲ್ಲಿ ಮಳೆ ಶುರು : ರಾಜ್ಯ ರಾಜಧಾನಿ ಕೂಲ್ ಕೂಲ್

ಬೆಂಗಳೂರು : ಇಂದು ಸಂಜೆ ಬಳಿಕ ದಿಢೀರನೆ ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ಶುರುವಾಯಿತು. ಅರ್ಧ ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿಯಿತು.

ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಜನತೆ ಎರಡು ದಿನಗಳಿಂದ ಸುರಿಯುತ್ತಿರು ಮಳೆಯಿಂದಾಗಿ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ದಿಢೀರ್​ ಮಳೆಯಿಂದ ಕೆಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಯಶವಂತಪುರ, ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ಬಸವನಗುಡಿ, ಚಾಮರಾಜಪೇಟೆ, ಕಾರ್ಪೊರೇಷನ್, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದೆ. ಇಂದು ಸಹ ದಿಢೀರ್ ಮಳೆ ಹಿನ್ನೆಲೆ ವಾಹನ​ ಸವಾರರು ಪರದಾಡುವಂತಾಗಿದೆ. ಇನ್ನು ಮಳೆಯಿಂದ ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್‌ ಸಿಟಿ ಜನ ನಿಟ್ಟುಸಿರು ಬಿಡುವಂತಾಗಿದೆ. ರಾಜ್ಯ ರಾಜಧಾನಿ ಕೂಲ್​ ಆಗಿದೆ.

ವಾಹನ ಸವಾರರು ಹೈರಾಣು

ಬೆಂಗಳೂರು ಹೊರತುಪಡಿಸಿ ಬೆಂಗಳೂರು ಗ್ರಾಮಾಂತರ, ನೆಲಮಂಗಲದಲ್ಲಿಯೂ ಭಾರಿ ಮಳೆಯಾಗಿದೆ. ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಮಲ್ಲಸಂದ್ರ ಸೇರಿದಂತೆ ಬಿರುಗಾಳಿ ಸಹಿತ ಬಾರಿ ಮಳೆ ಶುರುವಾಗಿದೆ. ಬೆಂಗಳೂರಿಗೆ ಬರುತ್ತಿರುವ ವಾಹನ ಸವಾರರು ಹೈರಾಣಾಗಿದ್ದಾರೆ.

RELATED ARTICLES

Related Articles

TRENDING ARTICLES