Monday, May 20, 2024

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ ಸ್ಥಾನ

ಬೆಂಗಳೂರು: 2023-24ನೇ ಸಾಲಿನ ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಪ್ರಕಟಿಸಿದ್ದು ಈ ಫಲಿತಾಂಶದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಂಡಳಿ ಅಧ್ಯಕ್ಷೆ ಮಂಜುಶ್ರೀ 2023-24ನೇ ಸಾಲಿನ ಎಸ್​​ಎಸ್​ಎಲ್​ಸಿ ಫಲಿತಾಂಶವನ್ನು ಪ್ರಕಟಿಸಿದರು.

ಈ ಬಾರಿಯ ಒಟ್ಟು ಫಲಿತಾಂಶ ಶೇ.73.40:

ಈ ಬಾರಿ ರಾಜ್ಯದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು sslc ಪರೀಕ್ಷೆ ಬರೆದಿದ್ದು ಒಟ್ಟು ಶೇ.73.40 ರಷ್ಟು ಫಲಿತಾಂಶ ಬಂದಿದೆ. 8.59,967 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ಬಾರಿ ಹೋಲಿಕೆ ಮಾಡಿದರೆ ಈ ಬಾರಿ ಶೇಕಡ 10 ರಷ್ಟು ಫಲಿತಾಂಶ ಕುಸಿತ ಕಂಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಲಿಂಗವಾರು ಒಟ್ಟಾರೆ ಫಲಿತಾಂಶ:

ಬಾಲಕರು:2,87,416(65.90%)
ಬಾಲಕಿಯರು’-3,43,788(81.11%)
SSLC ಪರೀಕ್ಷೆಯಲ್ಲಿ ಬಾಲಕಿಯರ ಮೇಲುಗೈ ಸಾಧಿಸಿದ್ದಾರೆ.

ಜಿಲ್ಲಾವಾರು ಫಲಿತಾಂಶ:

ಈ ಬಾರಿ ಪ್ರಕಟಗೊಂಡ ಜಿಲ್ಲಾವಾರು ಫಲಿತಾಂಶದ ಪ್ರಕಾರ ಉಡುಪಿ ಪ್ರಥಮ ಸ್ಥಾನ ಪಡೆದಿದ್ದು, ದ್ವಿತಿಯ ಮತ್ತು ತೃತಿಯ ಸ್ಥಾನವನ್ನು ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಪಡೆದುಕೊಂಡಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ 94% ಫಲಿತಾಂಶ, ದಕ್ಷಿಣ ಕನ್ನಡ 92.12%, ಶಿವಮೊಗ್ಗ 88.67%, ಕೊಡಗು 88.67%, ಉತ್ತರ ಕನ್ನಡ 86.54%, ಹಾಸನ 86.28%, ಮೈಸೂರು 85.5%, ಶಿರಸಿ 84.64%, ಬೆಂಗಳೂರು ಗ್ರಾ. 83.67%, ಚಿಕ್ಕಮಗಳೂರು 83.39%, ವಿಜಯಪುರ 79.82%, ಬೆಂಗಳೂರು ದಕ್ಷಿಣ 79%, ಬಾಗಲಕೋಟೆ 77.92%, ಬೆಂಗಳೂರು ಉತ್ತರ, 77.09%, ಹಾವೇರಿ 75.85%, ತುಮಕೂರು 75.16%, ಗದಗ 74.76%, ಚಿಕ್ಕಬಳ್ಳಾಪುರ 73.61%, ಮಂಡ್ಯ 73.59% ಕೋಲಾರ 73.57%, ಚಿತ್ರದುರ್ಗ 72.85%, ಧಾರವಾಡ 72.67%, ದಾವಣಗೆರೆ 72.49%, ಚಾಮರಾಜನಗರ 71.59%, ಚಿಕ್ಕೋಡಿ 69.82%, ರಾಮನಗರ 69.53%, ವಿಜಯನಗರ 65.61%, ಬಳ್ಳಾರಿ 64.99%, ಬೆಳಗಾವಿ 64.93%, ಮಧುಗಿರಿ 62.44%, ರಾಯಚೂರು 61.2%, ಕೊಪ್ಪಳ 61.16%, ಬೀದರ್ 57.52%, ಕಲಬುರಗಿ 53.04%, SSLC ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ 50.59% ಫಲಿತಾಂಶ ಬಂದಿದೆ.

RELATED ARTICLES

Related Articles

TRENDING ARTICLES