Sunday, September 8, 2024

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ ನೀಡಿದ ಅನ್ಯಕೋಮಿನ ವ್ಯಕ್ತಿ

ಕಲಬುರಗಿ: ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ ಕಲಬುರ್ಗಿ ನಗರದ ಹಾಗರಗಾ ಕ್ರಾಸ್​ ಬಳಿಯ ನಿವಾಸದಲ್ಲಿ ನಡೆದಿದೆ.

ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿ ಅರ್ಜುನ್ ಮಡಿವಾಳ ಸೇರಿದಂತೆ ಮೂವರ ಮೇಲೆ ಇಮ್ರಾನ್​ ಪಟೇಲ್​, ಮಹಮ್ಮದ್ ಮತೀನ್​ ಸೇರಿ ಹಲವು ದುಷ್ಕರ್ಮಿಗಳು ಹಲ್ಲೆ ಮಾಡಿ ಹಣ ಹಾಕಿಸಿಕೊಂಡು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಇದನ್ನು ಓದಿ: ದೊಡ್ಡಬಳ್ಳಾಪುರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಕಲಬುರಗಿ ನಗರದ ಹಾಗರಹಾ ಕ್ರಾಸ್​ ಬಳಿಯ ಮನೆಯ ಬಳಿ ರಮೇಶ್​ ಎಂಬಾತನಿಗೆ ಸೆಕೆಂಡ್​ ಹ್ಯಾಂಡ್​ ಕಾರು ತೋರಿಸಲು ಬಂದಾಗ ಈ ಮೂವರನ್ನು ಕೂಡಿಹಾಕಿದ ಇಮ್ರಾನ್​ ಪಟೇಲ್​, ಮಹಮ್ಮದ್ ಮತೀನ್​ ಗ್ಯಾಂಗ್​ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿ ಬಳಿಕ ಹಣಕ್ಕಾಗಿ ಬೇಡಿಕೆ ಇಟ್ಟು ಹಣಪಡೆದಿದ್ದಾರೆ. ಬಳಿಕ ಮತ್ತಷ್ಟು ಹಣ ನೀಡುವಂತೆ ಒತ್ತಡಹಾಕಿ ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ಕೊಟ್ಟು ಚಿತ್ರಹಿಂಸೆ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಕಲಬುರ್ಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು
ಆರೋಪಿಗಳ ಬಂಧನ ಮಾಡಿದ್ದಾರೆ.

RELATED ARTICLES

Related Articles

TRENDING ARTICLES