Tuesday, September 17, 2024

ಮುಂದಿನ 6 ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇದನ್ನೂ ಓದಿ: ವಿಧಾನ ಪರಿಷತ್​ ಚುನಾವಣೆ: JDS-BJP ಮೈತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 18ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಹಾಸಬ, ಕೊಡಗು, ಮೈಸೂರು,ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ,ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.

ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಗುಬ್ಬಿ, ಮಂಡ್ಯ, ಕೃಷ್ಣರಾಜಸಾಗರ, ಕೆಆರ್​ ನಗರ, ಹೆಸರಘಟ್ಟ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಸಂತೆಬೆನ್ನೂರು, ಕೃಷ್ಣರಾಜಪೇಟೆ, ಅರಕಲಗೂಡು, ಚಿಕ್ಕಮಗಳೂರು, ಮಾಗಡಿ, ಕುಶಾಲನಗರ, ಅಜ್ಜಂಪುರ, ಪಾವಗಡದಲ್ಲಿ ಮಳೆಯಾಗಿದೆ.

RELATED ARTICLES

Related Articles

TRENDING ARTICLES