Monday, July 1, 2024

ಪ್ರಜ್ವಲ್​ ರಾಸಲೀಲೆ ಪೆನ್​ಡ್ರೈವ್​ ಪ್ರಕರಣ: ಮಾಜಿ ಶಾಸಕ ಪ್ರೀತಂ ಗೌಡ ಆಪ್ತರನ್ನು ವಶಕ್ಕೆ ಪಡೆದ SIT

ಹಾಸನ: ಪ್ರಜ್ವಲ್​ ರೇವಣ್ಣ ರಾಸಲೀಲೆ ವೀಡಿಯೋಗಳ ಪೆನ್‌ಡ್ರೈವ್‌ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಅಚ್ಚರಿಯ ಸಂಗತಿಗಳು ಹೊರಬರುತ್ತಿದ್ದು ವೀಡಿಯೋ ವೈರಲ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹಾಸನ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಸೇರಿದಂತೆ ಇಬ್ಬರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.

ರಾಸಲೀಲೆಗಳ ಪೆನ್‌ಡ್ರೈವ್ ವೈರಲ್ ವಿಚಾರದಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಆಪ್ತರಾದ ಲಿಖಿತ್‌ಗೌಡ ಹಾಗೂ ಯಲಗುಂದ ಚೇತನ್ ಎಂಬ ಇಬ್ಬರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಇಬ್ಬರನ್ನೂ ಶನಿವಾರ ಮಧ್ಯರಾತ್ರಿಯೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರೀತಂಗೌಡ ಜೊತೆ ಚೇತನ್ ಹಾಗೂ ಲಿಖಿತ್ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ಪ್ರೀತಂ ಗೌಡ ಕಚೇರಿಯ ಸಿಬ್ಬಂದಿ ಹಾಗೂ ಅವರ ಆಪ್ತ ನಿಖಿತ್ ಎನ್ನಲಾಗಿದೆ.
ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಲಿಖಿತ್ ಎಂಬಾತ ಪ್ರೀತಂ ಗೌಡ ಜೊತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದ ಎಂದು ತಿಳಿದುಬಂದಿದೆ.

RELATED ARTICLES

Related Articles

TRENDING ARTICLES