Wednesday, September 18, 2024

ಮತ್ತೆ ಟಾಸ್ ಸೋತ ಚೆನ್ನೈ : ಇಂದು CSK ಗೆದ್ದರೆ RCBಗೆ ಸಂಕಷ್ಟ! ಚೆನ್ನೈ ಸೋಲಿಗಾಗಿ RCB ಫ್ಯಾನ್ಸ್ ಪ್ರಾರ್ಥನೆ

ಬೆಂಗಳೂರು : ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್​ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಇಂದು ಚೆನ್ನೈ ಗೆದ್ದರೆ ಆರ್​ಸಿಬಿಗೆ ಸಂಕಷ್ಟ ಎದುರಾಗಲಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಐಪಿಎಲ್​ನ 61ನೇ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಪ್ಲೇಆಫ್​ ರೇಸ್​ ಕಠಿಣವಾಗಿರುವುದರಿಂದ ಈ ಪಂದ್ಯ ಚೆನ್ನೈಗೆ ನಿರ್ಣಾಯಕವಾಗಿದೆ. ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಚೆನ್ನೈ ಸೋಲಲಿ ಎಂದು ಆರ್​ಸಿಬಿ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ.

ಚೆನ್ನೈ ಆಡಿರುವ 12 ಪಂದ್ಯಗಳಲ್ಲಿ 6 ಗೆಲುವು ಹಾಗೂ 6 ಪಂದ್ಯಗಳಲ್ಲಿ ಸೋಲು ಕಂಡಿದೆ. ರಾಜಸ್ಥಾನ 11 ಪಂದ್ಯಗಳನ್ನು ಆಡಿದ್ದು, 8 ಪಂದ್ಯಗಳಲ್ಲಿ ಗೆಲುವು ಹಾಗೂ 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಚೆನ್ನೈ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ 2ನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್

ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ/ವಿ.ಕೀ), ರಿಯಾನ್ ಪರಾಗ್, ಶುಭಂ ದುಬೆ, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್

ರಾಜಸ್ಥಾನ್ ಇಂಪ್ಯಾಕ್ಟ್ ಪ್ಲೇಯರ್ಸ್ : ರೋವ್‌ಮನ್ ಪೊವೆಲ್, ಟಾಮ್ ಕೊಹ್ಲರ್-ಕಾಡ್ಮೋರ್, ನಾಂದ್ರೆ ಬರ್ಗರ್, ತನುಷ್ ಕೋಟ್ಯಾನ್, ಕೇಶವ್ ಮಹಾರಾಜ್

ಚೆನ್ನೈ ಸೂಪರ್ ಕಿಂಗ್ಸ್

ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಡೇರಿಲ್ ಮಿಚೆಲ್, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂ.ಎಸ್. ಧೋನಿ (ವಿ.ಕೀ.), ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್, ಮಹೇಶ್ ತೀಕ್ಷಣ

ಚೆನ್ನೈ ಇಂಪ್ಯಾಕ್ಟ್ ಪ್ಲೇಯರ್ಸ್ : ಅಜಿಂಕ್ಯ ರಹಾನೆ, ಸಮೀರ್ ರಿಜ್ವಿ, ಪ್ರಶಾಂತ್ ಸೋಲಂಕಿ, ಅಜಯ್ ಮಂಡಲ್, ಮುಖೇಶ್ ಚೌಧರಿ

RELATED ARTICLES

Related Articles

TRENDING ARTICLES