Wednesday, July 3, 2024

ವಿಧಾನಪರಿಷತ್​ ಚುನಾವಣೆ: ಜೆಡಿಎಸ್​ಗೆ ಶಾಕ್​ ನೀಡಿದ ಬಿಜೆಪಿ, ತುರ್ತು ಸಭೆ ಕರೆದ HDK

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಪರಿಷತ್​ ಚುನಾವಣೆಯ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಮೈತ್ರಿ ಪಕ್ಷ ಜೆಡಿಎಸ್​ಗೆ ಒಂದು ಸ್ಥಾನವನ್ನಷ್ಟೆ ನೀಡಿರುವುದು ಜೆಡಿಎಸ್ ಪಕ್ಷದಲ್ಲಿ ಬಿರುಗಾಳಿಯನ್ನು ಬೀಸಿದೆ. ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಜೆಡಿಎಸ್​ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಮಂಡ್ಯ ನಾಯಕರ ಸಭೆಯನ್ನು ಕರೆದಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ವಿಧಾನ ಪರಿಷತ್​ ಚುನಾವಣೆಯಲ್ಲೂ ಮೈತ್ರಿ ಮುಂದಿವರೆಸಿರುವ ಜೆಡಿಎಸ್​ ಮತ್ತು ಬಿಜೆಪಿ, ಒಟ್ಟು 6 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕ್ಷೇತ್ರ ಹಂಚಿಕೆ ಮಾಡಿಕೊಂಡಿದ್ದು ಕ್ಷೇತ್ರಗಳ ಪಟ್ಟಿಯನ್ನು ಬಿಜೆಪಿ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ವಿಧಾನ ಪರಿಷತ್​ ಚುನಾವಣೆ: JDS-BJP ಮೈತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಿಜೆಪಿ ಚುನಾವಣಾ ಸಮಿತಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಒಟ್ಟು ಆರು ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ. ವಿಧಾನ ಪರಿಷತ್​ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷವು ದಕ್ಷಿಣ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಕ್ಷೇತ್ರ ಎರಡು ಸ್ಥಾನಗಳ ನಿರೀಕ್ಷೆಯಲ್ಲಿದ್ದವು, ಇದೀಗ ಒಂದು ಸ್ಥಾನವಷ್ಟೆ ನೀಡಿರುವುದಕ್ಕೆ ತೀವ್ರ ಆಘಾತಕ್ಕೊಳಗಾಗಿದೆ. ಈ ಹಿನ್ನೆಲೆ ಇಂದು ಮಾಜಿ ಸಿಎಂ ಹೆಚ್​ಡಿಕೆ ಮಂಡ್ಯ ಮುಖಂಡರೊಂದಿಗೆ ತುರ್ತು ಸಭೆಯನ್ನು ಕರೆದಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಜೆಪಿನಗರದ ಹೆಚ್​ಡಿಕೆ ನಿವಾಸದಲ್ಲಿ ಸಭೆಯನ್ನು ಕರೆದಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್​ ಟಿಕೆಟ್ ಆಕಾಂಕ್ಷಿಯಾಗಿರುವ ಕೆ.ಟಿ ಶ್ರೀಕಂಠೇಗೌಡ ಅವರಿಗೆ ನೀಡುವ ಕುರಿತು  ಇಂದು ನಡೆಯಲಿರುವ ಜೆಡಿಎಸ್​ ಮುಖಂಡರ ಸಭೆ ಮಹತ್ವವನ್ನು ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿಗೆ 5 ಸ್ಥಾನ:

ಶನಿವಾರ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಿಂದ ವಿಧಾನ ಪರಿಷತ್​ ಕ್ಷೇತ್ರಗಳ ಟಿಕೆಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗಳಾದ ಎ.ದೇವೇಗೌಡಗೆ ಟಿಕೆಟ್‌ ನೀಡಲಾಗಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಟಿಕೆಟ್‌ ಗಿಟ್ಟಿಸಿದ್ದಾರೆ. ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ ಪಾಟೀಲ್‌, ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ್‌ ಸರ್ಜಿ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜುಗೆ ಟಿಕೆಟ್‌ ನೀಡಲಾಗಿದೆ.

RELATED ARTICLES

Related Articles

TRENDING ARTICLES