Friday, July 5, 2024

ವಿಧಾನ ಪರಿಷತ್​ ಚುನಾವಣೆ: JDS-BJP ಮೈತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿನ ಮೈತ್ರಿ  ಬಳಿಕ ವಿಧಾನ ಪರಿಷತ್‌ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿದಿದೆ. ಬಿಜೆಪಿ 5 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಒಂದು ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.

ಶನಿವಾರ  ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡಗೆ ಟಿಕೆಟ್‌ ನೀಡಲಾಗಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಟಿಕೆಟ್‌ ಗಿಟ್ಟಿಸಿದ್ದಾರೆ. ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ ಪಾಟೀಲ್‌, ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ್‌ ಸರ್ಜಿ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜುಗೆ ಟಿಕೆಟ್‌ ನೀಡಲಾಗಿದೆ.
ಜೆಡಿಎಸ್​ ಗೆ ಒಂದು ಸ್ಥಾನ:
ಬಿಜೆಪಿ ಉಳಿದ ನೈರುತ್ಯ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಈ ಕ್ಷೇತ್ರದಿಂದ ಮೇಲ್ಮನೆ ಹಾಲಿ ಸದಸ್ಯ ಎಸ್‌.ಎಲ್.ಭೋಜೇಗೌಡ ಅವರಿಗೆ ಟಿಕೆಟ್‌ ನೀಡುವುದು ಖಚಿತವಾಗಿದೆ. ಆದರೆ ಈವರೆಗೆ ಅಧಿಕೃತ ಘೋಷಣೆಯಾಗಿಲ್ಲ.
ಜೂನ್​.3ಕ್ಕೆ ವಿಧಾನ ಪರಿಷತ್​​ ಚುನಾವಣೆ:
ಜೂ.3 ರಂದು ಚುನಾವಣೆ ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಮೇ 16 ರಂದು ಉಮೇದುವಾರಿಕೆ ಸಲ್ಲಿಕೆಗೆ ಕೊನೆ ದಿನವಾಗಿದೆ. ಮೇ 17 ನಾಮಪತ್ರ ಪರಿಶೀಲನೆ, ಮೇ 20 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಜೂ.6 ರಂದು ಮತ ಎಣಿಕೆ ನಡೆಯಲಿದೆ.

RELATED ARTICLES

Related Articles

TRENDING ARTICLES