Saturday, September 28, 2024

ಬೆಂಗಳೂರಿನಲ್ಲಿ 4 ದಿನ ಭಾರಿ ಮಳೆ : ರಾಜ್ಯದ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಬೆಳ್ಳಗೆಯಿಂದಲೇ ಮೋಡ ಕವಿದ ವಾತವರಣವಿದೆ. ಸಂಜೆ ವೇಳೆಗೆ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇಂದು ರಾತ್ರಿ ಗಾಳಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ನಿನ್ನೆಯೂ ಬೆಂಗಳೂರಿನಲ್ಲಿ ಗುಡುಗು ಸಹಿತ ಜೋರು ಮಳೆಯಾಗಿದೆ.

ಮುಂದಿನ 5 ದಿನಗಳ ಕಾಲ (ಮೇ 18 ರವರೆಗೆ) ರಾಜ್ಯಾದಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಇನ್ಣೂ ರಾಜ್ಯದ13 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ (ಹಳದಿ) ಘೋಷಿಸಲಾಗಿದೆ.

ಮಳೆಗೆ ಮೈ-ಬೆಂ ಹೆದ್ದಾರಿ ಜಲಾವೃತ

ರಾಜ್ಯದ ಹಲವೆಡೆ ಸುರಿದ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅಗ್ನಿಶಾಮಕ ದಳದ ಎದುರಿನ ಮೈಸೂರು-ಬೆಂಗಳೂರು ಹೆದ್ದಾರಿ ಧಾರಾಕಾರ ಮಳೆಗೆ ಜಲಾವೃತಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿ ಸುಮಾರು 3 ಅಡಿಗಳಷ್ಟು ನೀರು ತುಂಬಿಕೊಂಡಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಹಲವು ವಾಹನಗಳು ನೀರಿನ ಮಧ್ಯೆಯೇ ಸಿಲುಕಿ ಪರದಾಡುವಂತಾಯಿತು. ಬೈಕ್ ಸವಾರರು ಹೆದ್ದಾರಿಯಲ್ಲಿ ತೆರಳಲಾಗದೆ ಬದಲಿ ರಸ್ತೆಯಲ್ಲಿ ಸಾಗುತ್ತಿದ್ದಾರೆ.

RELATED ARTICLES

Related Articles

TRENDING ARTICLES