Saturday, October 5, 2024

SSLC ಟಾಪರ್ ಅಂಕಿತಾಗೆ 5 ಲಕ್ಷ, ನವನೀತ್​ಗೆ 3 ಲಕ್ಷ ನೆರವು ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಹಾಗೂ 3ನೇ ರ‍್ಯಾಂಕ್ ಪಡೆದ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ.

ಅಂಕಿತಾ ಬಸಪ್ಪ ಕೊಣ್ಣೂರು ಹಾಗೂ ನವನೀತ್‌ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಇಬ್ಬರನ್ನೂ ಸನ್ಮಾನಿಸಿ, ಅಂಕಿತಾಗೆ 5 ಲಕ್ಷ ಮತ್ತು ನವನೀತ್​ಗೆ 3 ಲಕ್ಷ ರೂ. ನೆರವು ಘೋಷಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಈ ಇಬ್ಬರು ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಶುಭ ಕೋರಿದೆ. ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಗ್ರಾಮೀಣ ಮಕ್ಕಳು ಇನ್ನಷ್ಟು ಶೈಕ್ಷಣಿಕ ಸಾಧನೆಗಳನ್ನು ಮಾಡುವಂತಾಗಲಿ. ಈ ಮಕ್ಕಳು ಓದಿದ ಶಾಲೆ ಮತ್ತಷ್ಟು ಸರ್ಕಾರಿ ಶಾಲೆಗಳಿಗೆ ಸ್ಪೂರ್ತಿಯಾಗಲಿ. ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಬ್ಬರೂ ವಸತಿ ಶಾಲೆಯ ವಿದ್ಯಾರ್ಥಿಗಳು

SSCL ಪರೀಕ್ಷೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಅಂಕಿತಾ ರಾಜ್ಯಕ್ಕೆ ಫಸ್ಟ್ ಫಸ್ಟ್ ರ‍್ಯಾಂಕ್ ಪಡೆದಿದ್ದಾರೆ. ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ 3ನೇ ರ‍್ಯಾಂಕ್ ಪಡೆದಿದ್ದಾರೆ.

RELATED ARTICLES

Related Articles

TRENDING ARTICLES