Sunday, July 7, 2024

ಟಾಸ್ ಗೆದ್ದ ರಾಜಸ್ಥಾನ ಬ್ಯಾಟಿಂಗ್ ಆಯ್ಕೆ : ಹೀಗಾದ್ರೆ ಮಾತ್ರ RR ಅಗ್ರಸ್ಥಾನಕ್ಕೇರಲು ಸಾಧ್ಯ

ಬೆಂಗಳೂರು : ಪಂಜಾಬ್​ ಕಿಂಗ್ಸ್ ವಿರುದ್ಧ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್​ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಗುವಾಹಟಿಯ ಬರ್ಸಾಪರಾ ಸ್ಟೇಡಿಯಂ ಐಪಿಎಲ್​ನ 65ನೇ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿದೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್​ ಇಂದಿನ ಪಂದ್ಯ ಗೆದ್ದು ಮೇಲೇಳಲು ಸಜ್ಜಾಗಿದೆ.

ಇತ್ತ ರಾಜಸ್ಥಾನ್ ರಾಯಲ್ಸ್​ ಸತತ ಮೂರು ಪಂದ್ಯಗಳಲ್ಲಿ ಸೋತರೂ ಈಗಾಗಲೇ ಪ್ಲೇಆಫ್​ ಪ್ರವೇಶಿಸಿದೆ. ಹೀಗಾಗಿ, ಆರ್​ಆರ್​ಗೆ ಇದು ಔಪಚಾರಿಕ ಪಂದ್ಯವಾಗಿರಲಿದೆ. ಇಂದಿನ ಪಂದ್ಯ ಗೆದ್ದರೆ RR 18 (ಪ್ರಸ್ತುತ 16 ಅಂಕ) ಅಂಕ ಪಡೆಯಲಿದೆ. ಮುಂದಿನ ಪಂದ್ಯದಲ್ಲಿ ಕೆಕೆಆರ್​ ತಂಡವನ್ನು ಮಣಿಸಿದರೆ 20 ಅಂಕಗಳೊಂದಿಗೆ ಸುಲಭವಾಗಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಬಹುದು.

ಪ್ರಸಕ್ತ ಆವೃತ್ತಿಯಲ್ಲಿ ರಾಜಸ್ಥಾನ 12 ಪಂದ್ಯಗಳನ್ನು ಆಡಿದ್ದು 8 ಗೆಲುವು ಹಾಗೂ 4 ಪಂದ್ಯಗಳಲ್ಲಿ ಸೋಲು ಕಂಡಿದೆ. ಪಂಜಾಬ್​ ಕಿಂಗ್ಸ್​ ಆಡಿರುವ 12 ಪಂದ್ಯಗಳಲ್ಲಿ 4 ಗೆಲುವು ಹಾಗೂ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಆರ್​ಆರ್​ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಪಂಜಾಬ್​ 8 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ.

ರಾಜಸ್ಥಾನ್‌ ರಾಯಲ್ಸ್‌

ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ.), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್

ಪಂಜಾಬ್‌ ಕಿಂಗ್ಸ್‌

ಪ್ರಭಾಸಿಮ್ರಾನ್ ಸಿಂಗ್, ಜಾನಿ ಬೈರ್‌ಸ್ಟೋವ್, ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿ.ಕೀ.), ಸ್ಯಾಮ್ ಕರ್ರನ್ (ನಾಯಕ), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

RELATED ARTICLES

Related Articles

TRENDING ARTICLES