Friday, June 14, 2024

ವಿಶ್ವಕಪ್​ನಲ್ಲಿ ನಂದಿನಿ ರಾರಾಜಿಸಲಿದೆ, ಕನ್ನಡ ಕಂಗೊಳಿಸಲಿದೆ : ಸಿದ್ದರಾಮಯ್ಯ ಹರ್ಷ

ಬೆಂಗಳೂರು : ಈ ಬಾರಿಯ ಟಿ-20 ವಿಶ್ವಕಪ್‌ನಲ್ಲಿ ನಂದಿನಿ ರಾರಾಜಿಸಲಿದೆ, ಕನ್ನಡ ಕಂಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳು ನಂದಿನಿ ಪ್ರಾಯೋಜಕತ್ವ ಪಡೆದಿರುವ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ.

ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T-20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ ಎಂದು ತಿಳಿಸಿದ್ದಾರೆ.

ನಂದಿನಿ ಜನಪ್ರಿಯತೆ ಮತ್ತಷ್ಟು ಹೆಚ್ಚಳ

ಶುದ್ಧತೆ ಮತ್ತು ಶ್ರೇಷ್ಠತೆಯ ಪ್ರತೀಕವಾಗಿರುವ ನಂದಿನಿಯು ಈಗ ಜಾಗತಿಕ ಬ್ರ್ಯಾಂಡ್‌ ಆಗಿ ಗುರುತಿಸಿಕೊಳ್ಳುವುದಕ್ಕೆ ಹೆಮ್ಮೆ ಎನಿಸುತ್ತದೆ. ಈ ಮೂಲಕ ನಂದಿನಿಯ ಮೌಲ್ಯ ಮತ್ತು ಜನಪ್ರಿಯತೆ ಮತ್ತಷ್ಟು ಹೆಚ್ಚಾಗಲಿದ್ದು, ಜನಪ್ರಿಯ ಕ್ರೀಡೆಯಾದ ಕ್ರಿಕೆಟ್‌ ತಂಡದ ಪ್ರಾಯೋಜಕತ್ವದಿಂದಾಗಿ ನಂದಿನಿ ಲೋಗೋ ವಿಶ್ವವ್ಯಾಪಿ ರಾರಾಜಿಸಲಿದೆ ಎಂದು KMF​ ಟ್ವೀಟ್ ಮಾಡಿದೆ.

RELATED ARTICLES

Related Articles

TRENDING ARTICLES