Thursday, September 19, 2024

ಶೌಚಾಲಯದಲ್ಲಿ ಯುವತಿ ಅನುಮಾನಾಸ್ಪದ ಸಾವು, ಕತ್ತು ಕೊಯ್ದು ಸ್ಥಿತಿಯಲ್ಲಿ ದೇಹ ಪತ್ತೆ

ಬೆಂಗಳೂರು: ಮನೆಯ ಶೌಚಾಲಯದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಸಾವನ್ನಪ್ಪಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬುಧವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಅಸಹಜ ಸಾವು ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಭುಧ್ಯಾ ಸಾವಿನಿಂದ ಇತ್ತ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗಳನ್ನು ಜೋಪಾನ ಮಾಡಿದ್ದೆ ಯಾರೋ ಕ್ರೂರವಾಗಿ ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ತಾಯಿ ಸೌಮ್ಯ ಕಣ್ಣೀರು ಹಾಕಿದ್ದಾರೆ. ಆಫೀಸ್‌ನಲ್ಲಿದ್ದ ನನಗೆ ಮಧ್ಯಾಹ್ನ ಫೋನ್‌ ಮಾಡಿದ್ದಳು. ಫ್ರೆಂಡ್ಸ್‌ ಜತೆಗೆ ಇದ್ದೀನಿ ಪಾನಿಪುರಿ ತಿಂದು ಮನೆಗೆ ಹೋಗುತ್ತಿನಿ ಅಂದಿದ್ದಳು. ನಂತರ ಆಫೀಸ್‌ ಮುಗಿಸಿ ಮನೆಗೆ ಬಂದು ನೋಡಿದಾಗ ಮಗಳು ಬಾತ್‌ ರೂಮಿನಲ್ಲಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.

ಮನೆಯ ಮುಂದಿನ ಡೋರ್‌ ಲಾಕ್‌ ಆಗಿತ್ತು. ಆದರೆ ಹಿಂದಿನ ಡೋರ್‌ ಓಪನ್‌ ಆಗಿತ್ತು. ಮಗಳ ಫೋನ್‌ ಸೋಫಾ ಮೇಲೆ ಇತ್ತು. ಆಕೆಯನ್ನು ಆಸ್ಪತ್ರೆಗೆ ಕೆರೆದುಕೊಂಡು ಹೋಗಿ ಬರುವಷ್ಟರಲ್ಲಿ ಫೋನ್‌ ಕೂಡ ಕಳ್ಳತನ ಆಗಿದೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವವಳು ಅಲ್ಲ.. ಯಾರೋ ಕೊಲೆ ಮಾಡಿದ್ದಾರೆ ಎಂದು ಪೋಷಕರು  ಆರೋಪಿಸಿದರು.

ಈ ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯತಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

RELATED ARTICLES

Related Articles

TRENDING ARTICLES