Thursday, September 19, 2024

ಬಸ್​​ ಕಿಟಕಿಯಲ್ಲಿ ತಲೆ ಸಿಲುಕಿ ಪರದಾಡಿದ ಮಹಿಳೆ!

ಬೆಂಗಳೂರು: KSRTC ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿ ಮೂಲಕ ತಲೆಯನ್ನು ಹೊರಹಾಕಿದಾಗ ಅವರ ತಲೆ ಕಿಟಕಿಗೆ ಸಿಕ್ಕಿಹಾಕಿಕೊಂಡು ಪರದಾಡಿರುವ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ ಕೇಸ್​: ಕೊನೆಗೂ ಸ್ಫೋಟಕ ಅಂಶ ಬಯಲು

ಬಸ್​ ಪ್ರಯಾಣದ ವೇಳೆ ಉಗಳುವ ಭರದಲ್ಲಿ ಕಿಟಕಿಯ ಸಣ್ಣ ಸಂದಿಯಿಂದಲೇ ತಲೆ ಹೊರ ಹಾಕಿದಾಗ ಮಹಿಳೆಯ ತಲೆ ಕಿಟಕಿಯಲ್ಲಿ ಲಾಕ್ ಆಗಿದೆ. ಹಾಗೆ ಹೊರ ಹಾಕಿದ ತಲೆ ವಾಪಸ್​ ಒಳಗೆ ಬಾರದೇ ಅಲ್ಲೆ ಲಾಕ್ ಆಗಿಬಿಟ್ಟಿದೆ. ಕಿಟಕಿಯಲ್ಲಿ ಸಣ್ಣ ಜಾಗವಿದ್ದ ಕಾರಣ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿತ್ತು. ಈ ವೇಳೆ ಮಹಿಳೆಯ ತಲೆ ಗಮನಿಸಿದ KSRTC ಬಸ್ ನ ಚಾಲಕ, ನಿರ್ವಾಹಕ ಲಾಕ್ ಆಗಿದ್ದ ಮಹಿಳೆಯ ಪರದಾಟ ಕಂಡು ಬಸ್ ನಿಲ್ಲಿಸಿದ್ದಾರೆ. ಬಳಿಕ ಅತ್ಯಂತ ಜಾಗರೂಕತೆಯಿಂದ ಮಹಿಳೆಯ ರಕ್ಷಣೆ ಮಾಡಿದ್ದಾರೆ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಗೆ ಯಾಕ್ ಬೇಕಿತ್ತು ಈ ಅವಾಂತರ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

RELATED ARTICLES

Related Articles

TRENDING ARTICLES