Tuesday, September 17, 2024

ಕೊಲೆ ಆರೋಪಿಗಳ ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡು

ದೊಡ್ಡಬಳ್ಳಾಪುರ: ನಗರದ ಹೊರವಲಯದ ಬಾಶೆಟ್ಟಿಹಳ್ಳಿಯಲ್ಲಿನ ಹೋಟೆಲ್ ಬಳಿ ಮೇ 10 ರಂದು ನಡೆದಿದ್ದ ಹೇಮಂತ್ ಗೌಡ ಹತ್ಯೆ ಪ್ರಕರಣದ ಆರೋಪಿ ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಕಾರಣ ಪೊಲೀಸರು ಗುಂಡು ಹಾರಿಸಿದ್ದಾರೆ.

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ಕೊಲೆ ಪ್ರಕರಣದ 2ನೇ ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸ್‌ ಕಾನ್ಸಟೇಬಲ್ ಚಂದ್ರು ಎನ್ನುವವರ ಮೇಲೆ ಹಲ್ಲೆ ಹಿನ್ನೆಲೆ ಆತ್ಮರಕ್ಷಣೆಗಾಗಿ ಇನ್ಸೆಕ್ಟರ್ ಸಾಧಿಕ್ ಪಾಷ ಅವರು ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಸಿಡಿಲು ಬಡಿದು ಯುವಕ ಸಾವು

ಇಂದು ಬೆಳಗ್ಗೆ ಖಚಿತ ಮಾಹಿತಿ ಮೆರೆಗೆ ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆ ಆರೋಪಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿ ಭೇಟಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES