Saturday, September 28, 2024

ಬಟ್ಟೆ ತೊಳೆಯಲು ಹೋಗಿ ನಾಲ್ವರು ಜಲ ಸಮಾಧಿ

ಕೊಲ್ಲಾಪುರ: ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ಕು ಮಂದಿ ಜಲಸಮಾಧಿಯಾದ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕಾಗಲ ತಾಲೂಕಿನ ಬಸ್ತವಾಡೆ ಸೇತುವೆ ಬಳಿ ನಡೆದಿದೆ.

ಮೃತಪಟ್ಟವರಲ್ಲಿ ಕರ್ನಾಟಕದ ಬೆಳಗಾವಿಯ ಇಬ್ಬರು ಸೇರಿದ್ದಾರೆ. ಮಳೆಯಿಂದ ಉಕ್ಕಿ ಹರಿಯುತ್ತಿದ್ದ ದೂದ್​ಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದಾಗ ಆಕಸ್ಮಿಕವಾಗಿ ಬಿದ್ದು ಮುಳುಗಿ 4 ಜನರು ಮೃತಪಟ್ಟಿದ್ದಾರೆ. ಇಲ್ಲಿನ ಗ್ರಾಮಸ್ಥರು ಇಬ್ಬರು ಮಹಿಳೆಯರು ಸೇರಿ 3 ಮಂದಿಯ ಶವಗಳನ್ನು ನದಿಯಿಂದ ಹೊರಕ್ಕೆ ತೆಗೆದಿದ್ದಾರೆ. ಇನ್ನೂ ಒಬ್ಬನ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆದಿದೆ.

ಇದನ್ನೂ ಓದಿ: ಪುಡಿರೌಡಿಗಳ ಅಟ್ಟಹಾಸ: ಅಂಗಡಿ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಮೃತರಲ್ಲಿ ಇಬ್ಬರು ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿಗಳಾಗಿದ್ದು, ರೇಶ್ಮಾ ದಿಲಿಪ ಏಳಮಲೇ ಹಾಗೂ ಯಶ್ ದಿಲಿಪ ಏಳಮಲೇ ಇವರಿಬ್ಬರೂ ಕಾಗಲ ತಾಲೂಕಿನ ಅನ್ನುರ ಗ್ರಾಮದ ಜಾತ್ರೆಗೆ ಸಂಬಂಧಿಕರ ಮನೆಗೆ ಬಂದಿದ್ದರು. ಇನ್ನಿಬ್ಬರು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯವರು ಎಂದು ತಿಳಿದುಬಂದಿದೆ. ಈ ಘಟನೆ ಸಂಬಂಧ ಕಾಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES