Tuesday, September 17, 2024

SSLC ಪರೀಕ್ಷೆ-2 ದಿನಾಂಕ ಮುಂದೂಡಿಕೆ!

ಬೆಂಗಳೂರು: SSLC ಪರೀಕ್ಷೆ-2 ದಿನಾಂಕವನ್ನು ಮುಂದೂಡಲಾಗಿದ್ದು ಫಲಿತಾಂಶ ಸುಧಾರಣೆ ಹಾಗೂ ಮಕ್ಕಳ ಅನುಕೂಲಕ್ಕಾಗಿ ತೆಗೆದುಕೊಂಡ ಹೊಸ ಉಪಕ್ರಮವಾದ ಎಸ್‌ಎಸ್ಎಲ್‌ಸಿ ಪರೀಕ್ಷೆ- 2 ಪರೀಕ್ಷೆ ಜೂನ್ 14ರಿಂದ ಆರಂಭವಾಗಲಿದೆ. ಈ ಕುರಿತು ಮಂಡಳಿ ಮಹತ್ವದ ಮಾಹಿತಿಯನ್ನು ನೀಡಿದೆ.

ಪರೀಕ್ಷಾ ದಿನಾಂಕ ಮುಂದೂಡಿದ ಬಳಿಕ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಲಾಗಿದೆ. ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ರವರೆಗೆ ನಡೆಸಲು ಆದೇಶ ನೀಡಿದೆ.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣ ರಾಸಲೀಲೆ ಪ್ರಕರಣ: ಮಾಜಿ ಪ್ರಧಾನಿ ದೇವೇಗೌಡ ಫಸ್ಟ್​ ರಿಯಾಕ್ಷನ್​

ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದಲ್ಲಿ 2024ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ 15.05.2024 ರಿಂದ ದಿನಾಂಕ:05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು.

ಇದೀಗ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ವಯ ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-02ನ್ನು ದಿನಾಂಕ: 14/06/2024 ರಿಂದ ಪ್ರಾರಂಭಿಸಲಾಗುವುದು. ಸದರಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಇವರು ಪ್ರತ್ಯೇಕವಾಗಿ ಹೊರಡಿಸುತ್ತಾರೆ.

RELATED ARTICLES

Related Articles

TRENDING ARTICLES