Saturday, July 27, 2024

ಇಂದು 5ನೇ ಹಂತದ ಲೋಕಸಭಾ ಚುನಾವಣೆ: 49 ಕ್ಷೇತ್ರಗಳಲ್ಲಿ ಮತದಾನ

ದೆಹಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ  ಇಂದು ಮೇ.20 ರಂದು ನಡೆಯಲಿದ್ದು, ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 49 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಐದನೇ ಹಂತದಲ್ಲಿ ಬಿಹಾರ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಜಾರ್ಖಂಡ್, ಮಹಾರಾಷ್ಟ್ರ, ಒಡಿಶಾ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ. ಲೋಕಸಭಾ ಚುನಾವಣೆ ಜತೆಯಲ್ಲೇ ಒಡಿಶಾದ 35 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದ್ದು, ಬಿಜೆಡಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕಣದಲ್ಲಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್​ ಪತನ: ಇರಾನ್​ ಅಧ್ಯಕ್ಷ ಇಬ್ರಾಹಿಂ​ ರೈಸಿ ದಾರುಣ ಸಾವು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ರಾಯ್‌ರೇಲಿ), ಬಿಜೆಪಿಯ ಸ್ಮೃತಿ ಇರಾನಿ (ಅಮೇಠಿ), ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ (ಲಖನೌ) ಮತ್ತು ಪೀಯೂಷ್ ಗೋಯಲ್ (ಮುಂಬೈ ಉತ್ತರ), ಒಮರ್ ಅಬ್ದುಲ್ಲಾ (ಬಾರಾಮುಲ್ಲಾ) ಹಾಗೂ ಆರ್‌ಜೆಡಿಯ ರೋಹಿಣಿ ಅಚಾರ್ಯ (ಸಾರಣ್) ಅವರು ಕಣದಲ್ಲಿರುವ ಪ್ರಮುಖರು.

2019ರ ಲೋಕಸಭಾ ಚುನಾವಣೆಯಲ್ಲಿ ಈ 49 ಕ್ಷೇತ್ರಗಳ ಪೈಕಿ 32ರಲ್ಲಿ ಬಿಜೆಪಿ ಗೆದ್ದಿತ್ತು. ಕಾಂಗ್ರೆಸ್ ರಾಯ್‌ಬರೇಲಿಯಲ್ಲಿ ಮಾತ್ರ ಜಯ ಸಾಧಿಸಿತ್ತು. ‘ಇಂಡಿಯಾ’ ಕೂಟವು ಕೇವಲ 9 ಕ್ಷೇತ್ರಗಳಲ್ಲಿ ಜಯಿಸಿತ್ತು.

ಮೊದಲ ನಾಲ್ಕು ಹಂತಗಳಲ್ಲಿ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಆರು ಮತ್ತು ಏಳನೇ ಹಂತದ ಮತದಾನ ಕ್ರಮವಾಗಿ ಮೇ 25 ಹಾಗೂ ಜೂನ್ 1 ರಂದು ನಡೆಯಲಿದೆ.
ಆಯೋಗದ ಮನವಿ: ಕಡಿಮೆ ಮತದಾನ ಪ್ರಮಾಣದ ಕುರಿತು ಕಳವಳ ವ್ಯಕ್ತಪಡಿಸಿರುವ ಚುನಾವಣಾ ಆಯೋಗ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮತದಾರರನ್ನು ಕೋರಿದೆ. ಮುಂಬೈ, ಠಾಣೆ ಮತ್ತು ಲಖನೌ ಮುಂತಾದ ನಗರಗಳ ಮತದಾರರಿಗೆ ವಿಶೇಷ ಮನವಿಯನ್ನೂ ಮಾಡಿದೆ. ಕಳೆದ ಬಾರಿ ನಗರ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನ ನಡೆದಿತ್ತು.

RELATED ARTICLES

Related Articles

TRENDING ARTICLES