Sunday, June 23, 2024

ಕಾರ್ಖಾನೆಯಲ್ಲಿ ಬಾಯ್ಲರ್​ ಸ್ಪೋಟ: ಮೂವರ ಸ್ಥಿತಿ ಚಿಂತಾಜನಕ

ಚಿಕ್ಕೋಡಿ: ಕಾರ್ಖಾನೆಯಲ್ಲಿ ಬಾಯ್ಲರ್​ ಸ್ಪೋಟಗೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಥಣಿ ತಾಲೂಕಿನ ಸಣ್ಣ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದಲ್ಲಿರುವ ಸಣ್ಣ ಕೈಗಾರಿಕಾ ಪ್ರದೇಶದಲ್ಲಿನ ಪ್ರಿಯಾ ಎಕ್ಸ್ಪೋರ್ಟ್​ ಕೈಗಾರಿಕಾ ಘಟಕದಲ್ಲಿ ಇಂದು ಬಾಯ್ಲರ್​ ಸ್ಪೋಟಗೊಂಡಿದೆ. ಈ ಸ್ಪೋಟದ ತೀವ್ರತೆಗೆ ತಾಲೂಕಿನ ಸತ್ತಿ ಗ್ರಾಮದ ಸುನಂದಾ ಸಿದ್ದಪ್ಪ ತೇಲಿ ಎಂಬ ಮಹಿಳೆ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ: ಕೆಲಸ ಕೊಡಿಸುವುದಾಗಿ ಹೇಳಿ ಮಹಾರಾಷ್ಟ್ರದಲ್ಲಿ ಮಹಿಳೆಯ ಮಾರಾಟ!: ದೂರು ದಾಖಲು

ಗಾಯಗೊಂಡವರನ್ನು ಅಥಣಿ ಪಟ್ಟಣ ಹಾಗೂ ಮಹಾರಾಷ್ಟ್ರದ ಮಿರಜ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES