Saturday, July 27, 2024

ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ: 7 ದಿನಗಳ ವರೆಗೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಇಂದಿನಿಂದ ರಾಜ್ಯದ ಹಲವೆಡೆ 7 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಕಾರ್ಯಕರ್ತರನ್ನ ಮುಟ್ಟಿದ್ರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ: ಶಾಸಕ ಹರೀಶ್​ ಪೊಂಜಾ

ಇಂದು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಭಾರೀ ಮಳೆಯ ಸಾಧ್ಯತೆ ಹಿನ್ನೆಲೆ 5 ಜಿಲ್ಲೆಗಳಿಗೆ ಇಂದು ಹಾಗೂ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದ ವಾತವರಣವಿದ್ದು, ಇಂದಿನಿಂದ ಎರಡು ದಿನಗಳ ಕಾಲ ಗಾಳಿ, ಗುಡುಗು ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಬೆಂಗಳೂರಿಗರಿಗೆ  ಇಲಾಖೆ ಎಚ್ಚರಿಸಿದೆ.

RELATED ARTICLES

Related Articles

TRENDING ARTICLES