Sunday, June 23, 2024

ಕಲಷಿತ ನೀರು ಕುಡಿದು ವ್ಯಕ್ತಿ ಸಾವು: 15 ಜನಕ್ಕೂ ಹೆಚ್ಚು ಜನರು ಅಸ್ವಸ್ಥ

ಮೈಸೂರು: ಕಲುಷಿತ ನೀರು ಕುಡಿದು ಓರ್ವ ಯುವಕ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕೆ‌.ಸಾಲುಂಡಿ ಗ್ರಾಮದಲ್ಲಿ ನಡೆದಿದೆ.

ಚಾಮುಂಡೇಶ್ವರಿ ಕ್ಷೇತ್ರದ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (20) ಸಾವನ್ನಪ್ಪಿದ ದುರ್ದೈವಿ. ಸೋಮವಾರ ತೀವ್ರ ವಾಂತಿ ಬೇದಿಯಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕನಕರಾಜು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೆಲಸ ಕೊಡಿಸುವುದಾಗಿ ಹೇಳಿ ಮಹಾರಾಷ್ಟ್ರದಲ್ಲಿ ಮಹಿಳೆಯ ಮಾರಾಟ!: ದೂರು ದಾಖಲು

ಕನಕರಾಜು ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿದ ಸುದ್ದಿ ತಿಳಿದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕಲುಚಿತ ನೀರು ಸೇವನೆ ಮಾಡಿರುವ ಗ್ರಾಮಸ್ಥರಿಗೆ ವಾಂತಿ, ಭೇದಿ ಶುರುವಾಗಿದ್ದು, ಐವರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ.

ವಿಚಾರ ತಿಳಿಯುತ್ತಿದ್ದಂತೆ ತಡರಾತ್ರಿಯೇ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಜನರ ಸಮಸ್ಯೆ ಆಲಿಸಿದರು. ಮುಂಜಾಗೃತ ಕ್ರಮವಾಗಿ ಅಧಿಕಾರಿಗಳು ಗ್ರಾಮದಲ್ಲೇ ಅಂಬುಲೆನ್ಸ್ ನಿಲ್ಲಿಸಿಕೊಂಡಿದ್ದಾರೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ಆಸ್ಪತ್ರೆಗೆ ರವಾನಿಸಲು ವೈದ್ಯರ ತಂಡ ಸಜ್ಜಾಗಿದೆ.

RELATED ARTICLES

Related Articles

TRENDING ARTICLES