Wednesday, July 3, 2024

ಪ್ರಜ್ವಲ್ ಪಾಸ್​ಪೋರ್ಟ್​ ರದ್ದುಗೊಳಿಸಲು ವಿದೇಶಾಂಗ ಸಚಿವಾಲಯಕ್ಕೆ SIT ಪತ್ರ

ಬೆಂಗಳೂರು: ರಾಸಲೀಲೆ ವೀಡಿಯೋಗಳ ಪೆನ್​ಡ್ರೈವ್​ ಪ್ರಕರಣ ಸುದ್ದಿ ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಆರೋಪಿ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ಪರಾರಿಯಾಗಿ ತಲೆಮರೆಸಿಕೊಂಡ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಜ್ವಲ್​ ರೇವಣ್ಣ ಪಾಸ್​ಪೋರ್ಟ್​ ರದ್ದುಗೊಳಿಸುವಂತೆ ಕೋರಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಇದನ್ನೂ ಓದಿ: ಪ್ರಜ್ವಲ್​ ಎಲ್ಲಿದ್ದರೂ ಬಂದ್ಬಿಡಪ್ಪ: ಕುಮಾರಸ್ವಾಮಿ ಮನವಿ

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

RELATED ARTICLES

Related Articles

TRENDING ARTICLES