Sunday, September 8, 2024

ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಕಾರ್ಖಾನೆ: ಆತಂಕದಲ್ಲಿ ಸ್ಥಳೀಯರು

ಬೆಂಗಳೂರು ಗ್ರಾಮಾಂತರ: ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಇ-ಪರಿಸರ ಕಾರ್ಖಾನೆಯಲ್ಲಿ ಎಲೆಕ್ಟ್ರಾನಿಕ್ ತ್ಯಾಜ್ಯಗಳ ಸಂಸ್ಕರಣಾ ಕೆಲಸ ನಡೆಯುತ್ತಿದ್ದಾಗಲೇ ಏಕಾಏಕಿ ಬೆಂಕಿ ಹೊತ್ತಿಕಂಡು ಧಗಧಗನೇ ಉರಿದಿದೆ. ಇದರ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಸುಟ್ಟು ಭಸ್ಮವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ  4 ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: ಪ್ರೇಯಸಿಯೊಂದಿಗೆ ನೇಣಿಗೆ ಶರಣಾದ ಪೊಲೀಸ್​ ಪೇದೆ

ಸದ್ಯ, ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿಶಾಮಕ ಠಾಣೆ ಅವಶ್ಯಕತೆ ಹೆಚ್ಚಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇನ್ನು, ಘಟನೆ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES