Monday, July 1, 2024

ಪ್ರಜ್ವಲ್​ ರೇವಣ್ಣ ಬಂಧನಕ್ಕೆ ಕೇಂದ್ರ ಸರ್ಕಾರ ಸಹಕರಿಸುತ್ತಿಲ್ಲ: ಗೃಹಸಚಿವ ಪರಮೇಶ್ವರ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ರಾಸಲೀಲೆಗಳ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದ್ದರೂ ಸ್ಪಂದಿಸುತ್ತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಅಸಮಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್​ ರೇವಣ್ಣ ರಾಸಲೀಲೆಗಳ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಹಕಾರ ನೀಡಬೇಕು, ಬರೀ ಟೀಕೆ ಟಿಪ್ಪಣಿ ಮಾಡಿದರೆ ಯಾವುದೇ ಪ್ರಯೋಜನ ಇಲ್ಲ. ಈಗಾಗಲೇ ವಿದೇಶದಲ್ಲಿರುವ ಪ್ರಜ್ವಲ್​ ಪಾಸ್​ ಪೋರ್ಟ್​ ರದ್ದತಿ ಮಾಡುವಂತೆ ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳಿಗೆ ಮತ್ತು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಕೇಂದ್ರ ಸ್ಪಂದನೆ ನೀಡುತ್ತಿಲ್ಲ ಎಂದರು.

ಇದನ್ನೂ ಓದಿ:ಪ್ರಜ್ವಲ್ ಪಾಸ್​ಪೋರ್ಟ್​ ರದ್ದುಗೊಳಿಸಲು ವಿದೇಶಾಂಗ ಸಚಿವಾಲಯಕ್ಕೆ SIT ಪತ್ರ 

ರಾಸಲೀಲೆ ಪ್ರಕರಣದಲ್ಲಿ ಪ್ರಜ್ವಲ್​ ಬಂಧನಕ್ಕೆ ಈಗಾಗಲೇ ನ್ಯಾಯಾಲಯವು ಅರೆಸ್ಟ್​ ವಾರೆಂಟ್​ ಹೊರಡಿಸಿದೆ. ಇದರ ಆಧಾರದದಲ್ಲಾದರೂ ಪಾಸ್​ಪೋರ್ಟ್​ ರದ್ದು ಮಾಡಿ ತನಿಖೆಗೆ ಕೇಂದ್ರ ಸಹಕಾರ ನೀಡಬೇಕು, ಇದು ರೇವಣ್ಣ ಅವರ ಪ್ರಶ್ನೇ ಅಲ್ಲ ಇದು ಕಾನೂನಿನ ಪ್ರಶ್ನೆ, ಕಾನೂನು ರಕ್ಷಣೆ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯೂ ಕೂಡ ಎಂದು ಅವರು ಆಗ್ರಹಿಸಿದರು.

ಕುಮಾರಸ್ವಾಮಿ ಇಷ್ಟದಂತೆ ತನಿಖೆ ನಡೆಸಲು ಸಾಧ್ಯವಿಲ್ಲ:

ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕೂ ಮಾತನಾಡುತ್ತಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಮತ್ತು ವಿಶೇಷ ತನಿಖಾ ತಂಡದ ನಿಯಮಗಳ ಪ್ರಕಾರ ಏನು ಮಾಡಬೇಕು ಅದನ್ನು ಮಾಡುತ್ತಾರೆ. ಜೊತೆಗೆ ಸರ್ಕಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗಲೂ ಪ್ರತಿಯೊಂದನ್ನು ಗಮನಿಸಿ ತೀರ್ಮಾನ ಮಾಡಲಾಗುತ್ತಿದೆ. ಕುಮಾರಸ್ವಾಮಿಯವರು ಪ್ರತಿನಿತ್ಯ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ, ಅವರೇ ತನಿಖೆಯನ್ನು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಮಾಡಬೇಕು ಎಂದು ನಿರ್ದೇಶನ ನೀಡಿದಂತೆ ಇದೆ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES