Wednesday, July 3, 2024

ಕಾಂಬೋಡಿಯಾದಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ

ದೆಹಲಿ: ಉದ್ಯೋಗ ಪಡೆಯುವ ಉತ್ಸಾಹದಲ್ಲಿ ಕಾಂಬೋಡಿಯಾದಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರನ್ನ ಇಲ್ಲಿನ ಭಾರತೀಯ ರಾಯಭಾರ ಕಚೇರಿ ರಕ್ಷಣೆ ಮಾಡಿದೆ. 60 ಮಂದಿಯ ಮೊದಲ ಬ್ಯಾಚ್‌ ಭಾರತಕ್ಕೆ ಮರಳಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಬೋಡಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು, ನಮ್ಮ ಅಧಿಕಾರಿಗಳ ತಂಡ ವಿದೇಶದಲ್ಲಿರುವ ಭಾರತೀಯರಿಗೆ ಯಾವಾಗಲು ಸಹಾಯಕ್ಕೆ ಬದ್ಧವಾಗಿದೆ. ಸದ್ಯ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿಯನ್ನ ರಕ್ಷಿಸಿದ್ದೇವೆ. ಅವರಿಂದು ಸ್ವದೇಶಕ್ಕೆ ಮರಳಿದ್ದಾರೆ. ಅದಕ್ಕಾಗಿ ನಮ್ಮ ಇಡೀ ಅಧಿಕಾರಿಗಳ ತಂಡಕ್ಕೆ ಧನ್ಯವಾದ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹನುಮ ಜನ್ಮಭೂಮಿಗೆ ಅನುದಾನ, ನಟ ಚೇತನ್ ವಿರೋಧ

ಕಾಂಬೋಡಿಯಾ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಸಿಹಾನೌಕ್ವಿಲ್ಲೆ ಎಂಬಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಸಂಕಷ್ಟದಲ್ಲಿ ಇದ್ದ ಭಾರತೀಯರನ್ನ ರಕ್ಷಣೆ ಮಾಡಿದ್ದಾರೆ. ಅಲ್ಲದೇ ಇನ್ಮುಂದೆ ಉದ್ಯೋಗಕ್ಕಾಗಿ ಕಾಂಬೋಡಿಯಾಕ್ಕೆ ಬರುವ ಭಾರತೀಯರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮೋದಿಸಿದ ಅಧಿಕೃತ ಏಜೆಂಟರ ಮೂಲಕ ಮಾತ್ರವೇ ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆಯನ್ನೂ ನೀಡಿದೆ.

RELATED ARTICLES

Related Articles

TRENDING ARTICLES