Tuesday, September 17, 2024

ಇಂದು 6ನೇ ಹಂತದ ಲೋಕಸಭೆ ಚುನಾವಣೆ: ಮತದಾನ ಪ್ರಕ್ರಿಯೆ ಆರಂಭ

ದೆಹಲಿ: ಇಂದು 6ನೇ ಹಂತದ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಈ ಚುನಾವಣೆಯಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 889 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.

7 ಸಂಸದೀಯ ಸ್ಥಾನಗಳನ್ನು ಹೊಂದಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಕೂಡ ಮತದಾನ ನಡೆಯುತ್ತಿದೆ. ಜೂನ್ 4ರಂದು ಎಲ್ಲ ಹಂತಗಳ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಇಂದು ಬಿಹಾರ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ದೆಹಲಿ , ಒಡಿಶಾ, ಉತ್ತರ ಪ್ರದೇಶ, ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯುತ್ತಿದೆ.

ಇದನ್ನೂ ಓದಿ: ಹೆಚ್‌ಡಿಕೆ ಅಣ್ಣನ ಮಗ ರೇಪ್‌ ಮಾಡಿದ್ದಾನೆ, ಕುಮಾರಸ್ವಾಮಿ ತನಿಖೆಯ ದಾರಿ ತಪ್ಪಿಸುತ್ತಿದ್ದಾರೆ: ಸಿಎಂ

899 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 1.52 ಕೋಟಿ ಮತದಾರರು ಇಂದು ಮತ ಚಲಾಯಿಸಲಿದ್ದಾರೆ. 82 ಲಕ್ಷ ಪುರುಷ ಮತ್ತು 69 ಲಕ್ಷ ಮಹಿಳಾ ಮತದಾರರು ಹಾಗೂ 1,228 ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 1.52 ಕೋಟಿ ಮತದಾರರು 13,000ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ತಮ್ಮ ಮತ ಚಲಾಯಿಸಲು ಅರ್ಹರಾಗಿದ್ದಾರೆ.

RELATED ARTICLES

Related Articles

TRENDING ARTICLES