Monday, July 1, 2024

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ: HDK ಮಾತಿಗೆ ಕೌಂಟರ್​ ಕೊಟ್ಟ ಸಿಎಂ ಸಿದ್ದರಾಮಯ್ಯ

ಮೈಸೂರು: ರಾಕೇಶ್ ಸಿದ್ದರಾಮಯ್ಯ ವಿಚಾರ ತೆಗೆದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ. ಈಗ ಆ ವಿಚಾರವನ್ನ ಇನ್ ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್‌ ವಿಚಾರಕ್ಕೂ ಏನು ಸಂಬಂಧ ಎಂದು ಕಿಡಿಕಾರಿದರು.

ರೇಪ್​ಗಿಂತ ಅದ್ರ ವಿಡಿಯೋ ಹಂಚಿದ್ದು ದೊಡ್ಡ ಅಪರಾಧ ಎಂದ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೇಪ್​ಗಿಂತ ವಿಡಿಯೋ ಹಂಚಿದು ದೊಡ್ಡ ಅಪರಾಧ ಅಂಥ ಯಾವ ಕಾನೂನಿನಲ್ಲಿದೆ ಹೇಳಿ. ಕುಮಾರಸ್ವಾಮಿ ಏನಾದ್ರೂ ಸೆಕ್ಷನ್ ಹೇಳಿದ್ದರಾ? ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ?:ಸಿಎಂ ಸಿದ್ದರಾಮಯ್ಯ ವಿರುದ್ಧ HDK ವಾಗ್ದಾಳಿ

ಹಾಗಂತ ನಾನು ವಿಡಿಯೋ ವಿತರಣೆ ಸಮರ್ಥನೆ ಮಾಡುತ್ತಿಲ್ಲ. ಆದ್ರೆ ರೇಪ್​ಗಿಂತ ವಿಡಿಯೋ ಹಂಚಿದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯದಿಂದ ಕೇಂದ್ರಕ್ಕೆ ಪತ್ರ ತಡವಾಗಿ ಬಂದಿದೆ:

ಸರ್ಕಾರದಿಂದ ಕೇಂದ್ರಕ್ಕೆ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವರ ಜೈ ಶಂಕರ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ. ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು‌ 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಪತ್ರ ಬರೆದರೂ ನನಗೆ ರಿಪ್ಲೈ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದು ಕೊಳ್ಳಿ ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಹೇಳಿ. ಸುಮ್ಮನೆ ಕಾಲ ಕಳೆಯುವುದನ್ನ ಬಿಟ್ಟು ಪಾಸ್​​ಪೋರ್ಟ್ ರದ್ದು ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES