Thursday, September 19, 2024

ರೇವ್ ಪಾರ್ಟಿ: ಆಂಧ್ರ ಸಚಿವ, MLA ಆಪ್ತರು ವಶಕ್ಕೆ, ಐವರ ಬ್ಯಾಂಕ್ ಅಕೌಂಟ್ ಸೀಜ್

ಬೆಂಗಳೂರು: ಜಿ.ಆರ್.ಫಾರ್ಮ್ ಹೌಸ್ ರೇವ್ ಪಾರ್ಟಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ಇದೀಗ ಆಂಧ್ರ ಸಚಿವ ಕಾಕನಿ ಗೋವರ್ಧನ ರೆಡ್ಡಿ ಹಾಗೂ ಎಂಎಲ್ಎ ಶ್ರೀಕಾಂತ್ ರೆಡ್ಡಿ ಆಪ್ತರನ್ನು ಸಿಸಿಬಿ ವಶಕ್ಕೆ ಪಡೆದಿದ್ದಾರೆ.

ಮೇ 19 ರಂದು ಎಲೆಕ್ಟ್ರಾನಿಕ್ ಸಿಟಿ ಹೊರವಲಯದ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಆಯೋಜನೆಯಾಗಿತ್ತು. ಪಾರ್ಟಿ ವೇಳೆ ಸಿಸಿಬಿ ತಂಡ ದಾಳಿ ನಡೆಸಿದ್ದು ತೆಲಗು ನಟಿ ಹೇಮಾ, ಆಶಿ‌ ರಾಯ್ ಸೇರಿದಂತೆ ಹಲವು ಸ್ಟಾರ್​ಗಳನ್ನು ವಶಕ್ಕೆ ಪಡೆಯಲಾಗಿತ್ತು. ಆ ವೇಳೆ ಕಾರೊಂದರಲ್ಲಿ ಆಂಧ್ರ ಸಚಿವ ಗೋವರ್ಧನ್‌ ರೆಡ್ಡಿ ಪಾಸ್ ಪತ್ತೆಯಾಗಿತ್ತು. ಇದರ ಜಾಡು ಬೆನ್ನತಿದ ಸಿಸಿಬಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಲಾಕಪ್ ಡೆತ್: ಪೊಲೀಸ್​ ಠಾಣೆ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜುಗಳು ಪುಡಿಪುಡಿ

ಪಾಸ್ ವಿಚಾರವಾಗಿ ಹುಡುಕಾಟ ನಡೆಸಿದ್ದ ಸಿಸಿಬಿ ಅಧಿಕಾರಿಗಳು ಹೈದರಾಬಾದ್ ಮೂಲದ ಪೂರ್ಣ ರೆಡ್ಡಿ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಈತ ಸಿಸಿಬಿ ದಾಳಿ ವೇಳೆ ಎಸ್ಕೇಪ್ ಆಗಿದ್ದ. ರೇವ್ ಪಾರ್ಟಿ ಆಯೋಜನೆಯಲ್ಲಿ ಈತ ಪ್ರಮುಖ ಪಾತ್ರವಹಿಸಿದ್ದ. ಜೊತೆಗೆ ಕಾಕಾನಿ ಗೋವರ್ಧನ ರೆಡ್ಡಿಗೆ ಆಪ್ತ ಎಂಬ ಮಾಹಿತಿ ತಿಳಿದುಬಂದಿದೆ. ಸದ್ಯ ಪೂರ್ಣ ರೆಡ್ಡಿಯ ವಿಚಾರಣೆ ನಡೆಸಲಾಗುತ್ತಿದೆ.

ರೇವ್ ಪಾರ್ಟಿ- ಐವರ ಬ್ಯಾಂಕ್ ಅಕೌಂಟ್ ಸೀಜ್:

ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ಬಂಧಿತರ ಐವರು ಆರೋಪಿಗಳ ಅಕೌಂಟ್‍ನಲ್ಲಿದ್ದ ಹಣವನ್ನು ಸಿಸಿಬಿ ಪೊಲೀಸರು ಸೀಜ್ ಮಾಡಿದ್ದಾರೆ. ಆರೋಪಿಗಳ ಅಕೌಂಟ್‍ನಲ್ಲಿ ಲಕ್ಷಲಕ್ಷ ಹಣ ಪತ್ತೆಯಾಗಿತ್ತು. ಹೀಗಾಗಿ ಸಿಸಿಬಿ ಅಧಿಕಾರಿಗಳು ಎಲ್ಲಾ ಅಕೌಂಟ್‍ಗಳನ್ನ ಫ್ರೀಜ್ ಮಾಡಿಸಿದ್ದಾರೆ. ಅಲ್ಲದೆ ಆರೋಪಿಗಳ ಮೊಬೈಲ್ ಮಿರರ್ ಇಮೇಜ್ ಮಾಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಬೇರೆ ಎಲ್ಲೆಲ್ಲಿ ರೇವ್ ಪಾರ್ಟಿ ಮಾಡಿಸಿದ್ರು..? ಯಾರೆಲ್ಲ ಭಾಗಿಯಾಗಿದ್ರು..?, ರೇವ್ ಪಾರ್ಟಿಗೆ ಎಷ್ಟು ಹಣ ವಸೂಲಿ ಮಾಡ್ತಿದ್ರು..? ಡ್ರಗ್ಸ್ ಎಲ್ಲಿಂದ ಬರ್ತಿತ್ತು..?, ಎಲ್ಲ ಮಾಹಿತಿ ಪತ್ತೆ ಮಾಡಲು ಮೊಬೈಲ್ ಮಿರರ್ ಇಮೇಜಿಂಗ್ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ಐವರು ಆರೋಪಿಗಳನ್ನ ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆಯಲು ಕೂಡ ತಯಾರಿ ನಡೆಯುತ್ತಿದೆ.

ಸೋಮವಾರ ಕೋರ್ಟ್ ಗೆ ಅರ್ಜಿ ಹಾಕಿ ಆರೋಪಿಗಳನ್ನ ಕಸ್ಟಡಿಗೆ ಪಡೆಯಲು ಸಿಸಿಬಿ ಹಾಗೂ ಆರೋಪಿಗಳ ವಿಚಾರಣೆ ಬಳಿಕ ನಟಿ ಹೇಮಾ ಸೆರಿದಂತೆ ಪಾರ್ಟಿಯಲ್ಲಿದ್ದವರಿಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದೆ.

RELATED ARTICLES

Related Articles

TRENDING ARTICLES