Wednesday, July 3, 2024

3 ತಿಂಗಳಿಂದ ಅನ್ನಭಾಗ್ಯದ ಹಣ ಸ್ಥಗಿತ!: ಸಾರ್ವಜನಿಕರು ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಸಂದಾಯ ಮಾಡುತ್ತಿದ್ದ ಹಣ ಕಳೆದ ಮೂರು ತಿಂಗಳಿನಿಂದ ಜಮೆಯಾಗಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಅನ್ನಭಾಗ್ಯ ಯೋಜನೆಯಡಿ ನಾಲ್ಕು ಕೋಟಿಗೂ ಅಧಿಕ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಹೆಚ್ಚುವರಿ ಅಕ್ಕಿಗೆ 660 ಕೋಟಿ ರು. ಜಮೆ ಮಾಡಲಾಗುತ್ತಿದೆ. ಆದರೆ, ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನ ಹಣದಲ್ಲಿ ನಯಾಪೈಸೆಯನ್ನೂ ಈವರೆಗೆ ಜಮೆ ಮಾಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಇದನ್ನೂ ಓದಿ: ಮೇ 29ರ ವರೆಗೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ಬ್ಯಾಂಕ್ ಖಾತೆಗೆ ಜಮೆ ಮಾಡದಿರಲು ತಾಂತ್ರಿಕ ದೋಷವೇ ಕಾರಣವೆಂದು ಆಹಾರ ಇಲಾಖೆ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ಆದರೆ, ಗೃಹಲಕ್ಷ್ಮೀ ಯೋಜನೆಗೆ ಈ ತಾಂತ್ರಿಕ ದೋಷ ಅಡ್ಡಿಯುಂಟು ಮಾಡಿಲ್ಲ. ಪ್ರತಿ ತಿಂಗಳು ಗೃಹ ಲಕ್ಷ್ಮೀಯರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸಂದಾಯವಾಗುತ್ತಿದೆ. ಅನ್ನಭಾಗ್ಯ ಯೋಜನೆಯ ಹಣ ನೇರ ಪಾವತಿಗೆ ನಿಜವಾಗಿಯೂ ತಾಂತ್ರಿಕ ದೋಷ ಕಾರಣವೇ ಎಂಬುದು ಹಲವರು ಪ್ರಶ್ನಿಸುತ್ತಿದ್ದಾರೆ.

RELATED ARTICLES

Related Articles

TRENDING ARTICLES