Friday, July 5, 2024

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ದುರಂತ: 6 ನವಜಾತ ಶಿಶುಗಳು ಸಾವು

ದೆಹಲಿ: ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ದುರಂತ ಸಂಭವಿಸಿದ್ದು ಕನಿಷ್ಠ 6 ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.

ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11:32ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಆರು ನವಜಾರ ಶಿಶುಗಳು ಸಾವನ್ನಪ್ಪಿದ್ದು 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. ಐವರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಬೆಂಕಿ ಅವಘಡದ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ 16 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು ಭಾನುವಾರ ಮುಂಜಾನೆಯವರೆಗೂ ಕಾರ್ಯಾಚರಣೆ ನಡೆಸಿ ಬೆಂಕಿ ಶಮನ ಮಾಡುವಲ್ಲಿ ಯಶಸ್ವಿಯಾಗಿದೆ.
ಈ ವೇಳೆ ಆಸ್ಪತ್ರೆಯೊಳಗೆ ಇಡಲಾಗಿದ್ದ ಹಲವಾರು ಆಮ್ಲಜನಕ ಸಿಲಿಂಡರ್‌ಗಳೂ ಬೆಂಕಿಗೆ ಆಹುತಿಯಾಗಿವೆ. ಒಂದು ಆಸ್ಪತ್ರೆ ಕಟ್ಟಡ ಮತ್ತು ಎರಡು ಮಹಡಿಗಳು ವಸತಿ ಕಟ್ಟಡಗಳು ಬೆಂಕಿಯಿಂದ ಹಾನಿಗೊಳಗಾಗಿವೆ.

RELATED ARTICLES

Related Articles

TRENDING ARTICLES