Friday, July 5, 2024

ಮೇ 29ರ ವರೆಗೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯ ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದ್ದು ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್​ ಎಚ್ಚರಿಕೆಯನ್ನು ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿದ್ದು, ಮುಂದಿನ ಮೂರು ದಿನಗಳಲ್ಲಿ ಕರ್ನಾಟಕ ಮತ್ತು ಗೋವಾದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ಪರಿಚಲನೆಯು ಪ್ರಸ್ತುತ ಕೇರಳದ ಮೇಲೆ ಕೆಳ ಮತ್ತು ಮಧ್ಯಮ ಉಷ್ಣವಲಯದ ವಲಯ ಮಟ್ಟದಲ್ಲಿದೆ, ಇದು  ಮೇ 29 ರವರೆಗೆ ಮಳೆ, ಗುಡುಗು, ಮಿಂಚು ಮತ್ತು ಸ್ಕ್ವಾಲ್ಸ್ ಅನ್ನು ತರುವ ನಿರೀಕ್ಷೆಯಿದೆ.

ಇದನ್ನೂ ಓದಿ: ಭಾರೀ ಮಳೆಗೆ 4 ಸಾವಿರ ಬಾಳೆ ಗಿಡಗಳು ನಾಶ

ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಒಳನಾಡಿನಲ್ಲಿ ವಿಶೇಷವಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಪ್ರಕ್ಷುಬ್ಧ ವಾತಾವರಣವಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

RELATED ARTICLES

Related Articles

TRENDING ARTICLES