Tuesday, September 17, 2024

ಹಾಸನದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು

ಹಾಸನ: ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪ ಇಂದು ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಎಲ್ಲಾ 6 ಜನರೂ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ) ಹಾಗು ರಾಕೇಶ್ (ಚಾಲಕ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿ ಕಂಟೇನರ್‌ಗೆ ಗುದ್ದಿದೆ. ನಜ್ಜುಗುಜ್ಜಾದ ಕಾರೊಳಗಿಂದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.

ಇದನ್ನೂ ಓದಿ: ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ಕೊಂದು ತಿಂದ ಹುಲಿ!

ಇವರೆಲ್ಲಾ ಹೊಸಕೋಟೆ ತಾಲೂಕಿನವರಾಗಿದ್ದು, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಈಟಿಯೋಸ್ ಕಾರಿನಲ್ಲಿ ಹೋಗಿದ್ದರು. ಬಳಿಕ ವಾಪಾಸ್​ ಮಂಗಳೂರಿನಿಂದ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಹಾಸನ ಎಸ್ಪಿ ಮಹಮದ್ ಸುಚಿತಾ ಭೇಟಿ ನೀಡಿ ಪರಿಶೀಲಿಸಿದರು. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES