Sunday, September 8, 2024

SRHಗೆ ಹೀನಾಯ ಸೋಲು : 10 ವರ್ಷಗಳ ಬಳಿಕ ಮತ್ತೆ ಚಾಂಪಿಯನ್‌ ಪಟ್ಟಕ್ಕೇರಿದ ಕೆಕೆಆರ್‌

ಬೆಂಗಳೂರು : 2024ರ ಐಪಿಎಲ್ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್ ತಂಡವನ್ನು ಮಣಿಸಿದ ಶ್ರೇಯಸ್ ಅಯ್ಯರ್ ಸಾರಥ್ಯದ ಕೊಲ್ಕತ್ತಾ ನೈಟ್‌ ರೈಡರ್ಸ್‌ ಚಾಂಪಿಯನ್ ಪಟ್ಟ ಅಲಂಕರಿಸಿತು. 10 ವರ್ಷಗಳ ಬಳಿಕ ಮತ್ತೆ ಕೆಕೆಆರ್​ ಚಾಂಪಿಯನ್​ ಪಟ್ಟಕ್ಕೇರಿತು.

ಈ ಮೂಲಕ ಕೊಲ್ಕತ್ತಾ ನೈಟ್‌ ರೈಡರ್ಸ್‌ ಐಪಿಎಲ್ ಇತಿಹಾಸದಲ್ಲಿ ಮೂರನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಹಿಂದೆ 2012 ಹಾಗೂ 2014ರಲ್ಲಿ ಚಾಂಪಿಯನ್​ ಟ್ರೋಫಿ ಗೆದ್ದಿತ್ತು. ಇನ್ನೂ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಲಾ 5 ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿವೆ.

ಚೆನ್ನೈನ ಚೆಪಾಕ್‌ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ ರೈಸರ್ಸ್‌ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಿತು. ಟಾಸ್ ಗೆದ್ದಿದ್ದನ್ನು ಬಿಟ್ಟರೆ, ಹೈದರಾಬಾದ್ ಗೆಲುವಿಗಾಗಿ ದಿಟ್ಟ ಹೋರಾಟ ನಡೆಸಲಿಲ್ಲ. ಸ್ಫೋಟಕ ಬ್ಯಾಟರ್​ಗಳೆಲ್ಲರೂ ವಿಫಲರಾದರು. ಹೀಗಾಗಿ, ಹೈದರಾಬಾದ್​ ತಂಡ ಕೆಕೆಆರ್​ಗೆ 114 ರನ್​ಗಳ ಸುಲಭ ಟಾರ್ಗೆಟ್ ನೀಡಿತ್ತು. ಇದನ್ನು ಬೆನ್ನಟ್ಟಿದ ಕೊಲ್ಕತ್ತಾ ನೈಟ್‌ ರೈಡರ್ಸ್‌ 10.3 ಓವರ್​ಗಳಲ್ಲಿ ಗುರಿ ತಲುಪಿತು.

ಕೊಲ್ಕತ್ತಾ ನೈಟ್‌ ರೈಡರ್ಸ್‌ ಪರ ರಹಮಾನುಲ್ಲಾ ಗುರ್ಬಾಜ್ 39, ಸುನಿಲ್ ನರೈನ್ 6, ವೆಂಕಟೇಶ್ ಅಯ್ಯರ್ ಅಜೇಯ 52 ಹಾಗೂ ನಾಯಕ ಶ್ರೇಯಸ್ ಅಯ್ಯರ್ 6 ರನ್ ಗಳಿಸಿದರು. ಹೈದರಾಬಾದ್ ಪರ ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ಶಹಬಾಜ್ ಅಹಮದ್ ತಲಾ ಒಂದು ವಿಕೆಟ್ ಪಡೆದರು.

RELATED ARTICLES

Related Articles

TRENDING ARTICLES