Sunday, September 8, 2024

3ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಕೊಲ್ಕತ್ತಾ ನೈಟ್ ರೈಡರ್ಸ್

ಬೆಂಗಳೂರು : ಕೊನೆಗೂ ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆ ನಿಜವಾಗಿದೆ. ಐಪಿಎಲ್​-2024ರ ಫೈನಲ್ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿದ ಕೊಲ್ಕತ್ತಾ ನೈಟ್‌ ರೈಡರ್ಸ್‌ 3ನೇ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದುಕೊಂಡಿದೆ.

ಚೆನ್ನೈನ ಚೆಪಾಕ್‌ ಸ್ಟೇಡಿಯಂನಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಫೈನಲ್‌ ಪಂದ್ಯದಲ್ಲಿ ನಡೆಯಿತು. ಈ ರೋಚಕ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ಆರಂಭದಿಂದಲೂ ಸನ್‌ ರೈಸರ್ಸ್‌ ಹೈದರಾಬಾದ್ ಮೇಲೆ ಹಿಡಿತ ಸಾಧಿಸಿತು.

ಟಾಸ್ ಗೆದ್ದ ಸನ್‌ ರೈಸರ್ಸ್‌ ಹೈದರಾಬಾದ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. 18.3 ಓವರ್​ಗಳಲ್ಲಿ 113 ರನ್​ಗಳಿಗೆ ಆಲೌಟ್​ ಆಯಿತು. ಈ ಮೂಲಕ ಫೈನಲ್​ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿಯಿತು. ಈ ಸುಲಭ ಟಾರ್ಗೆಟ್ ಬೆನ್ನಟ್ಟಿದ ಕೊಲ್ಕತ್ತಾ ನೈಟ್‌ ರೈಡರ್ಸ್‌ 10.3 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ನಗೆ ಬೀರಿತು.

ಕೊಲ್ಕತ್ತಾ ನೈಟ್‌ ರೈಡರ್ಸ್‌ ಪರ ರಹಮಾನುಲ್ಲಾ ಗುರ್ಬಾಜ್ 39, ವೆಂಕಟೇಶ್ ಅಯ್ಯರ್ ಅಜೇಯ 52 ಹಾಗೂ ನಾಯಕ ಶ್ರೇಯಸ್ ಅಯ್ಯರ್ 6 ರನ್ ಗಳಿಸಿದರು. ಹೈದರಾಬಾದ್ ಪರ ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ಶಹಬಾಜ್ ಅಹಮದ್ ತಲಾ ಒಂದು ವಿಕೆಟ್ ಪಡೆದರು.

ಈ ಬಾರಿಯ ಐಪಿಎಲ್​-2024ರ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದ ಕೊಲ್ಕತ್ತಾ ನೈಟ್‌ ರೈಡರ್ಸ್‌ ಹಾಗೂ ಸನ್‌ ರೈಸರ್ಸ್‌ ಹೈದರಾಬಾದ್ ತಂಡಗಳೇ ಫೈನಲ್​ಗೆ ಪ್ರವೇಶಿಸಿದ್ದವು. ಮೇ 21ರಂದು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು ಮಣಿಸಿ ಕೆಕೆಆರ್​ ಫೈನಲ್​ ಪ್ರವೇಶಿಸಿತ್ತು. ಶುಕ್ರವಾರ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ ಹೈದರಾಬಾದ್ ಫೈನಲ್​ಗೆ ಎಂಟ್ರಿ ಕೊಟ್ಟಿತ್ತು.

RELATED ARTICLES

Related Articles

TRENDING ARTICLES