Sunday, September 8, 2024

ಟಾಸ್ ಗೆದ್ದ SRH ಬ್ಯಾಟಿಂಗ್ ಆಯ್ಕೆ : ಯಾರು ಐಪಿಎಲ್ ಕಪ್ ಗೆಲ್ಲುತ್ತಾರೆ? ಕಾಮೆಂಟ್ ಮಾಡಿ

ಬೆಂಗಳೂರು : ಐಪಿಎಲ್-2024ರ ಫೈನಲ್‌ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಟಾಸ್ ಗೆದ್ದಿರುವ ಸನ್‌ ರೈಸರ್ಸ್‌ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್​ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಚೆನ್ನೈನ ಚೆಪಾಕ್‌ ಸ್ಟೇಡಿಯಂನಲ್ಲಿ ಈ ರೋಚಕ ಪಂದ್ಯ ನಡೆಯುತ್ತಿದೆ. ಇಂದಿನ ಪಂದ್ಯ ಗೆದ್ದವರು ಐಪಿಎಲ್-2024ರ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಲಿದ್ದಾರೆ.

ಈ ಬಾರಿಯ ಐಪಿಎಲ್​-2024ರ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದ ತಂಡಗಳೇ ಫೈನಲ್​ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಮೇ 21ರಂದು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು ಮಣಿಸಿ ಕೆಕೆಆರ್​ ಫೈನಲ್​ ಪ್ರವೇಶಿಸಿತ್ತು. ಶುಕ್ರವಾರ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ ಹೈದರಾಬಾದ್ ಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಸನ್‌ ರೈಸರ್ಸ್‌ ಹೈದ್ರಾಬಾದ್‌

ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್ (ವಿ.ಕೀ.), ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ. ನಟರಾಜನ್

ಹೈದರಾಬಾದ್ ಇಂಪ್ಯಾಕ್ಟ್ ಪ್ಲೇಯರ್ಸ್ : ಉಮ್ರಾನ್ ಮಲಿಕ್, ಗ್ಲೆನ್ ಫಿಲಿಪ್ಸ್, ಮಯಾಂಕ್ ಮಾರ್ಕಾಂಡೆ, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್

ಕೊಲ್ಕತ್ತಾ ನೈಟ್‌ ರೈಡರ್ಸ್‌

ರಹಮಾನುಲ್ಲಾ ಗುರ್ಬಾಜ್ (ವಿ.ಕೀ.), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

ಕೋಲ್ಕತ್ತಾ ಇಂಪ್ಯಾಕ್ಟ್ ಪ್ಲೇಯರ್ಸ್ : ಅನುಕುಲ್ ರಾಯ್, ಮನೀಶ್ ಪಾಂಡೆ, ನಿತೀಶ್ ರಾಣಾ, ಕೆಎಸ್ ಭರತ್, ಶೆರ್ಫೈನ್ ರುದರ್ಫೋರ್ಡ್

RELATED ARTICLES

Related Articles

TRENDING ARTICLES