Thursday, September 19, 2024

ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ‘ಸುಪ್ರೀಂ’ ಮೆಟ್ಟಿಲೇರಿದ ಕೇಜ್ರಿವಾಲ್

ದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು. ಮುಖ್ಯಮಂತ್ರಿ ಇದೀಗ ಸಲ್ಲಿಸಿರುವ ತಮ್ಮ ಹೊಸ ಅರ್ಜಿಯಲ್ಲಿ, ತಾವು ಏಳು ಕೆಜಿ ತೂಕವನ್ನು ಕಳೆದುಕೊಂಡಿರುವುದು ಸೇರಿದಂತೆ ಆರೋಗ್ಯದ ಆಧಾರದ ಮೇಲೆ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳವರೆಗೆ ವಿಸ್ತರಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ: ಪೆನ್​ಡ್ರೈವ್​ ಪ್ರಕರಣ: ಕಾನೂನಾತ್ಮಕವಾಗಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಆಗಬೇಕು: ರಾಬರ್ಟ್​ ವಾದ್ರಾ

ತಾವು ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ ಮತ್ತು ಈ ಉದ್ದೇಶಕ್ಕಾಗಿ ಜೂನ್ 1 ರಂದು ಕೊನೆಗೊಳ್ಳಲಿರುವ ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

RELATED ARTICLES

Related Articles

TRENDING ARTICLES