Tuesday, September 17, 2024

ಮಹಿಳೆಯರ ಖಾತೆಗೆ ಒಂದು ಲಕ್ಷ: ಪೋಸ್ಟ್​ ಆಫೀಸ್​ ಅಕೌಂಟ್​ ತೆರೆಯಲು ಮುಗಿಬಿದ್ದ ಜನ

ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರು ಪ್ರಧಾನ ಅಂಚೆ ಕಚೇರಿ ಬಳಿ ಸಾರ್ವಜನಿಕರು ಸಾಲುಗಟ್ಟಿ ನಿಂತಿದ್ದು ಖಾತೆ ತೆರೆಯಲು ಮುಗಿಬಿದ್ದಿದ್ದಾರೆ.

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ದೇಶದ ಮಹಿಳೆಯರ ಖಾತೆಗೆ 1ಲಕ್ಷ ಹಾಕಲಾಗುವುದು, ಇದರನ್ವಯ ಪ್ರತಿ ತಿಂಗಳು ಖಾತೆಗೆ 8 ಸಾವಿರ ರೂ. ಹಣ ಜಮೆಯಾಗುವುದು ಎಂದು ಲೋಕಸಭಾ ಚುನಾವಣೆ ವೇಳೆ ರಾಹುಲ್​ ಗಾಂಧಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಈ ಯೋಜನೆ ಜಾರಿಗೆ ಬರಲಿದೆ ಎಂಬ ವಿಶ್ವಾಸದಿಂದ ಮಹಿಳೆಯರು ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (IPPB) ಅಡಿ ಖಾತೆ ತೆರೆಯಲು ನಗರದ ವಿವಿಧ ಭಾಗಗಳಿಂದ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು.

ಇದನ್ನೂ ಓದಿ: ಭಾರತಕ್ಕೆ ಬರಲು ಪ್ರಜ್ವಲ್ ವಿಮಾನ ಟಿಕೆಟ್ ಬುಕ್

ಅಂಚೆ ಕಚೇರಿಯತ್ತ ಹೆಚ್ಚಿನ ಜನರು ಆಗಮಿಸುತ್ತಿರುವ ಹಿನ್ನೆಲೆ ಬೆಂಗಳೂರು ಕಚೇರಿಯಲ್ಲೂ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ ಖಾತೆಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿತ್ತು. ಇಂಡಿಯನ್‌ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಅಕೌಂಟ್‌ ತೆರೆದವರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂಬ ವದಂತಿಗಳು ಕಳೆದ ವಾರಾಂತ್ಯದಲ್ಲಿ ಹರಿದಾಡುತ್ತಿದ್ದವು. ಇದರಿಂದ ಮಹಿಳೆಯರು ಪೋಸ್ಟ್‌ ಆಫೀಸ್‌ಗಳಿಗೆ ಮುಗಿ ಬಿದ್ದಿದ್ದರು.

ಕಳೆದ 15 ದಿನಗಳಿಂದ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಖಾತೆ ಮಾಡಿಸಲು ದಾಂಗುಡಿಯಿಡುತ್ತಿದ್ದು, ಬೆಂಗಳೂರು ಅಂಚೆ ಕಚೇರಿ ಸಿಬ್ಬಂದಿ ಸಂಪೂರ್ಣ ಹೈರಾಣಾಗಿದ್ದಾರೆ. ನಿತ್ಯ ಬೆಳಗ್ಗೆ 4 ಗಂಟೆಯಿಂದಲೇ ಟೋಕನ್ ಪಡೆದು ಖಾತೆ ಮಾಡಿಸಲು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಕಚೇರಿ ಸಿಬ್ಬಂದಿಯಾಗಲಿ, ಅಧಿಕಾರಿಗಳಾಗಲಿ ಮಹಿಳೆಯರನ್ನ ಕೇಳಿದ್ರೆ `ಅಕ್ಕಪಕ್ಕದವರು ಅಕೌಂಟ್‌ಗೆ ಹಣ ಬರುತ್ತೆ ಅಂತ ಹೇಳಿದ್ರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಣ ನೀಡುತ್ತಾರಂತೆ. ಅದಕ್ಕಾಗಿ ಖಾತೆ ಮಾಡಿಸಲು ಕ್ಯೂನಲ್ಲಿ ನಿಂತಿದ್ದೇವೆ’ ಅಂತಾ ಹೇಳಿದ್ದಾರೆ.

RELATED ARTICLES

Related Articles

TRENDING ARTICLES