Monday, July 1, 2024

ಭಾರತಕ್ಕೆ ಬರಲು ಪ್ರಜ್ವಲ್ ವಿಮಾನ ಟಿಕೆಟ್ ಬುಕ್

ಬೆಂಗಳೂರು: ಪೆನ್​ಡ್ರೈವ್ ಅಶ್ಲೀಲ ವಿಡಿಯೊಗಳ ಪ್ರಕರಣದ ಪ್ರಮುಖ ಆರೋಪಿ ಕಾಮಿ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ವಾಪಸ್​ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಏರ್​ ಟಿಕೆಟ್​ ಬುಕ್ ಮಾಡಿದ ವಿವರ ಲಭ್ಯವಾಗಿದೆ.

ಮೇ 31ರ ತಡರಾತ್ರಿ ಸುಮಾರು 1.30ಕ್ಕೆ ಪ್ರಜ್ವಲ್‌ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಪ್ರಕರಣದ ತನಿಖೆ ನಡೆಸುವ SIT ಪ್ರಜ್ವಲ್ ರೇವಣ್ಣಗಾಗಿ ಕಾಯುತ್ತಿದ್ದು ಭಾರತಕ್ಕೆ ಬಂದ ತಕ್ಷಣ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಇಂದು, ಬಂಧನ ಭೀತಿಯಲ್ಲಿ ಭವಾನಿ

ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಟಿಕೆಟ್​ ಬುಕ್​ ಮಾಡಿಕೊಂಡಿದ್ದು ಅಲ್ಲಿಂದಲೇ ಅವರನ್ನು SIT ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಿದ್ದಾರೆ. ಒಂದು ತಿಂಗಳಿನಿಂದ ಕಾಣೆಯಾಗಿದ್ದ ಅವರು ಮತ್ತೆ ದೇಶಕ್ಕೆ ವಾಪಸ್ ಬರುವುದಾಗಿ, SIT ತನಿಖೆಗೆ ಸಹಕರಿಸುವುದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES