Wednesday, July 3, 2024

ಸಂತ್ರಸ್ತೆ ಅಪಹರಣ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಇಂದು, ಬಂಧನ ಭೀತಿಯಲ್ಲಿ ಭವಾನಿ

ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಕಿಡ್ನಾಪ್ ಪ್ರಕರಣದಲ್ಲಿ ಹೆಚ್‍ಡಿ ರೇವಣ್ಣ ಬಳಿಕ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗಿದೆ. ಸಂತ್ರಸ್ತೆಯ ಮಗ ಕೊಟ್ಟ ದೂರಿನಲ್ಲಿ ಭವಾನಿ ಹೆಸರು ಉಲ್ಲೇಖವಾಗಿದ್ದು, ಎಫ್‍ಐಆರ್ ದಾಖಲಾಗಿದೆ. ಈ ಸಂಬಂಧ ಎಸ್‍ಐಟಿ ಎರಡು ಬಾರಿ ನೋಟಿಸ್ ಕೊಟ್ಟರೂ ಉತ್ತರಿಸದೇ ಚಳ್ಳೆಹಣ್ಣು ತಿನ್ನಿಸುತ್ತಿರುವ ಭವಾನಿಗೆ ಬಂಧನದ ಭೀತಿ ಎದುರಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಸೆಷನ್ಸ್ ಕೋರ್ಟ್, ಇಂದು ಬೆಳಗ್ಗೆ 11 ಗಂಟೆಗೆ ಮುಂದೂಡಿದೆ.

ಇದನ್ನೂ ಓದಿ: ಪ್ರಜ್ವಲ್​ ವೀಡಿಯೋ ಸಮಾಧಾನ ತಂದಿದೆ: ಹೆಚ್​.ಡಿ ಕುಮಾರಸ್ವಾಮಿ

ರೇವಣ್ಣ ಜಾಮೀನು ರದ್ದುಪಡಿಸಲು SIT ಅರ್ಜಿ:

ಸಂತ್ರಸ್ತ ಮಹಿಳೆಯೊಬ್ಬರ ಅಪಹರಣ ಆರೋಪ ಎದುರಿಸುತ್ತಿರುವ ಹೆಚ್.ಡಿ.ರೇವಣ್ಣ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆಗಳು ಹೆಚ್ಚಾಗಿದೆ. ರೇವಣ್ಣ ಜಾಮೀನು ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ಎಸ್‌ಐಟಿ ಹೈಕೋರ್ಟ್‌ಗೆ ಮನವಿ ಮಾಡಿದೆ.

ಈ ಕುರಿತಂತೆ ಸಲ್ಲಿಸಲಾಗಿರುವ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

RELATED ARTICLES

Related Articles

TRENDING ARTICLES