Monday, July 1, 2024

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನಕ್ಕೆ ದೀದಿ ಟೀಕೆ

ಬೆಂಗಳೂರು: ಜೂನ್ 4 ರ ಚುನಾವಣಾ ಫಲಿತಾಂಶಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ಕನ್ಯಾಕುಮಾರಿಯಲ್ಲಿ ಧ್ಯಾನಕ್ಕೆ ಮುಂದಾಗಿರುವುದನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಟುವಾಗಿ ಟೀಕಿಸಿದ್ದಾರೆ.

ಯಾರು ಬೇಕಾದರು ಹೋಗಿ ಧ್ಯಾನ ಮಾಡಬಹುದು. ಆದರೆ ಧ್ಯಾನ ಮಾಡುವಾಗ ಕ್ಯಾಮೆರಾ ತೆಗೆದುಕೊಂಡು ಹೋಗುತ್ತಾರೆಯೇ ಎಂದು ದೀದಿ ಪ್ರಶ್ನಿಸಿದ್ದಾರೆ. ಅಲ್ಲದೇ ಚುನಾವಣೆಗೆ 48 ಗಂಟೆಗಳ ಮೊದಲು ಎಸಿ ರೂಮಿನಲ್ಲಿ ಹೋಗಿ ಕೂರುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ವಿಧಾನಪರಿಷತ್​ ಚುನಾವಣೆ: ಇಂದು ನಾಳೆಯೊಳಗೆ ಅಧಿಕೃತ ಪಟ್ಟಿ ಬಿಡುಗಡೆ ಸಾಧ್ಯತೆ

ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕನ್ಯಾಕುಮಾರಿಯಲ್ಲಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ ಮಾಡಲಿದ್ದಾರೆ. ನಾನು ಕೂಡ ಕನ್ಯಾಕುಮಾರಿಗೆ ಭೇಟಿ ನೀಡುವ ಪ್ಲಾನ್‌ ಮಾಡಿದ್ದೆ. ಆದರೆ ಮೋದಿಯವರು ಅಲ್ಲಿಗೆ ಭೇಟಿ ನೀಡುವ ವಿಷಯ ತಿಳಿದ ಮೇಲೆ ಯೋಜನೆ ಬದಲಾಯಿಸಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದರು. ಮೋದಿ ಭೇಟಿಯ ಕುರಿತು ಯಾಕೆ ಯಾರೂ ಬಾಯಿಬಿಡುತ್ತಿಲ್ಲ ಎಂದು ನನಗೆ ತಿಳಿದಿಲ್ಲ. ಸ್ವಾಮಿ ವಿವೇಕಾನಂದರು ಅಲ್ಲಿ ಧ್ಯಾನ ಮಾಡಿದ್ದರು. ಆದರೆ ಈಗ ಪ್ರಧಾನಿ ಅಲ್ಲಿಗೆ ಹೋಗಿ ಧ್ಯಾನ ಮಾಡುತ್ತಿದ್ದಾರೆ. ಇದು ನಿಜಕ್ಕೂ ನನಗೆ ತುಂಬಾ ಬೇಸರ ತಂದಿದೆ ಎಂದು ಬ್ಯಾನರ್ಜಿ ಹೇಳಿದರು.

RELATED ARTICLES

Related Articles

TRENDING ARTICLES