Sunday, September 8, 2024

T20 WorldCup: ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಉಗ್ರರ ಬೆದರಿಕೆ

ದೆಹಲಿ: ಇದೇ ಮೊದಲ ಬಾರಿಗೆ ಅಮೇರಿಕಾ ಮತ್ತು ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ಟಿ-20 ವಿಶ್ವಕಪ್​ ನಡೆಯಲಿದ್ದೂ ಈ ವಿಶ್ವಕಪ್​ ಪಂದ್ಯಾವಳಿಯ ಮೇಲೆ ಉಗ್ರರ ಕರಿನೆರಳು ಬಿದ್ದಿದೆ. ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಉಗ್ರ ಸಂಘಟನೆಯಿಂದ ಬೆದರಿಕೆ ಕರೆ ಬಂದಿದೆ ಎಂದು ಅಮೆರಿಕದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಸಿಸ್​ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಖೊರಾಸನ್​ ಉಗ್ರ ಸಂಘಟನೆ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ದಿನ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ. ಈ ಬಗ್ಗೆ ವಿಡಿಯೊ ಹೇಳಿಕೆ ಪ್ರಸಾರವಾಗಿದೆ ಎಂದು ಪೊಲೀಸ್ ಅಧಿಕಾರಿ ಪ್ಯಾಟ್ರಿಕ್ ರೈಡ‌ರ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್​ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಹಾಸನದಲ್ಲಿ ಬೃಹತ್​​ ಪ್ರತಿಭಟನೆ

ಇದೇ ವೇಳೆ ನಗರದ ಗವರ್ನರ್ ಅವರು ಭದ್ರತಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿ, ಬಿಗಿ ಬಂದೋಬಸ್ತ್ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನ್ಯೂಯಾರ್ಕ್​​​ನ ಐಸೆನೋವಾ‌ರ್ ಪಾರ್ಕ್‌ನಲ್ಲಿರುವ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜೂನ್ 9ರಂದು ಪಂದ್ಯ ನಡೆಯಲಿದೆ.

RELATED ARTICLES

Related Articles

TRENDING ARTICLES