Wednesday, July 3, 2024

ಪ್ರಜ್ವಲ್​ ರೇವಣ್ಣ 6 ದಿನಗಳ ಕಾಲ SIT ಕಸ್ಟಡಿಗೆ: ಕೋರ್ಟ್​ ತೀರ್ಪು

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ರೂವಾರಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ 6 ದಿನಗಳ ಕಾಲ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ.

ಬರೊಬ್ಬರಿ ಒಂದು ತಿಂಗಳ ಬಳಿಕ ಜರ್ಮನಿಯ ಮ್ಯೂನಿಕ್‌ನಿಂದ ತಡರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್‌ ನನ್ನು ಪೊಲೀಸರು ಬಂಧಿಸಿ ಸಿಐಡಿ, ಎಸ್‌ಐಟಿ ಕಚೇರಿಗೆ ಕರೆ ತಂದರು. ಎಸ್‌ಐಟಿ ಕಚೇರಿಯಲ್ಲೇ ರಾತ್ರಿ ಕಳೆದ ಪ್ರಜ್ವಲ್‌ ಅವರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತುರ್ತು ನಿಗಾ ಘಟಕದ ಕಟ್ಟಡದಲ್ಲಿ ಬಿಪಿ, ಶುಗರ್, ಪಲ್ಸ್, ಹಾರ್ಟ್ ರೇಟ್, ಯೂರಿನ್, ರಕ್ತ ಪರೀಕ್ಷೆ ನಡೆಸಲಾಯಿತು.

ಈ ಪರೀಕ್ಷೆಯ ನಂತರ ಪೊಲೀಸರು 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ವೇಳೆ ಎಸ್‌ಐಟಿಯು ಪ್ರಜ್ವಲ್​ನನ್ನು 15 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು. ವಾದ ವಿವಾದಗಳನ್ನು ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿ ಬಳಿಕ 15ದಿನಗಳ ಬದಲಿಗೆ 6 ದಿನಗಳ ಕಾಲ SIT ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು.

RELATED ARTICLES

Related Articles

TRENDING ARTICLES