Monday, July 8, 2024

ನಾಳೆಯಿಂದ ಜೂನ್ 6ರವರೆಗೆ ಮದ್ಯ ಮಾರಾಟ ಬಂದ್?

ಬೆಂಗಳೂರು: ಕರ್ನಾಟಕದಾದ್ಯಂತ ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಭಾಗಶಃ ಬಂದ್ ಆಗಲಿದೆ.

ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಿರಲಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ. ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: 48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ: ರಾಜ್ಯಾದ್ಯಂತ ಜೋರು ಮಳೆ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಏಪ್ರಿಲ್ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಮದ್ಯ ಮಾರಾಟ ನಿಷೇಧದಿಂದ ವಹಿವಾಟಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಬೆಂಗಳೂರಿನ ಮದ್ಯ ಮಾರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಕಾರ್ಪೊರೇಟ್ ಪಾರ್ಟಿಗಳು ಮತ್ತು ಇತರ ಕಾರ್ಯಕ್ರಮಗಳನ್ನು ಆಯೋಜಿಸುವ ಶನಿವಾರ ಸಂಜೆಯೇ ಮದ್ಯ ಮಾರಾಟದ ಮೇಲಿನ ನಿಷೇಧವು ಪ್ರಾರಂಭವಾಗುತ್ತದೆ. ಇದರಿಂದ ದಿನಕ್ಕೆ 30 ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಲಿದೆಯಂತೆ.

RELATED ARTICLES

Related Articles

TRENDING ARTICLES